ಉತ್ತರ ಕನ್ನಡದಲ್ಲಿ ಮಳೆಯ ಕಾರಣ ಶಾಲೆಗಳಿಗೆ ರಜೆ
ಕಾರವಾರ, 23 ಜುಲೈ (ಹಿ.ಸ.) : ಆ್ಯಂಕರ್ : ಭಾರತೀಯ ಹವಾಮಾನ ಇಲಾಖೆ ಘೋಷಿಸಿರುವ ಕಿತ್ತಳೆ ಎಚ್ಚರಿಕೆ ಹಾಗೂ ನಿರಂತರ ಮಳೆಯ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಮತ್ತು ಭಟ್ಕಳ ತಾಲೂಕುಗಳಲ್ಲಿನ ಪ್ರಾಥಮಿಕ, ಪ್ರೌಢಶಾಲೆಗಳು ಮತ್ತು ಅಂಗನವಾಡಿಗಳಿಗೆ ಇಂದು ರಜೆ ಘೋಷಿಸ
ಉತ್ತರ ಕನ್ನಡದಲ್ಲಿ ಮಳೆಯ ಕಾರಣ ಶಾಲೆಗಳಿಗೆ ರಜೆ


ಕಾರವಾರ, 23 ಜುಲೈ (ಹಿ.ಸ.) :

ಆ್ಯಂಕರ್ : ಭಾರತೀಯ ಹವಾಮಾನ ಇಲಾಖೆ ಘೋಷಿಸಿರುವ ಕಿತ್ತಳೆ ಎಚ್ಚರಿಕೆ ಹಾಗೂ ನಿರಂತರ ಮಳೆಯ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಮತ್ತು ಭಟ್ಕಳ ತಾಲೂಕುಗಳಲ್ಲಿನ ಪ್ರಾಥಮಿಕ, ಪ್ರೌಢಶಾಲೆಗಳು ಮತ್ತು ಅಂಗನವಾಡಿಗಳಿಗೆ ಇಂದು ರಜೆ ಘೋಷಿಸಲಾಗಿದೆ.

ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಮುಂಜಾಗ್ರತಾ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ವಿಪತ್ತು ನಿರ್ವಹಣಾ ಕಾಯ್ದೆ 2005ರ ಕಲಂ 34(ಎಂ) ಅಡಿಯಲ್ಲಿ ಈ ಆದೇಶ ಹೊರಡಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande