ವಿಜಯಪುರ, 23 ಜುಲೈ (ಹಿ.ಸ.) :
ಆ್ಯಂಕರ್ : ವಿಜಯಪುರ ನಗರದ ಶತಮಾನ ಕಂಡ ಶ್ರೀ ಸಿದ್ದೇಶ್ವರ ಸಂಸ್ಥೆ ಹಾಗೂ ಸಿದ್ದಸಿರಿ ಸೌಹಾರ್ದ ಸಹಕಾರಿ ಸಂಘ ನಿಯಮಿತದಿಂದ ಕೊಪ್ಪಳ ನಗರದ ಶ್ರೀ ಗವಿಸಿದ್ದೇಶ್ವರ ಮಠದ ದಾಸೋಹಕ್ಕಾಗಿ 101 ಕ್ವಿಂಟಲ್ ಅಕ್ಕಿ ಹಾಗೂ 5001 ವಿಭೂತಿಗಳನ್ನು ಬುಧವಾರ ನೀಡಲಾಯಿತು.
ಸಿದ್ದೇಶ್ವರ ಸಂಸ್ಥೆ ಹಾಗೂ ಸಿದ್ದಸಿರಿ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರು ಹಾಗೂ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ರವರ ನೇತೃತ್ವದಲ್ಲಿ ಶ್ರೀಮಠಕ್ಕೆ ಭೇಟಿ ನೀಡಿ, ಅಭಿನವ ಗವಿಸಿದ್ದೇಶ್ವರ ಶ್ರೀಗಳ ದರ್ಶನಾಶೀರ್ವಾದ ಪಡೆದುಕೊಂಡು, 101 ಕ್ವಿಂಟಲ್ ಅಕ್ಕಿ ಹಾಗೂ ಸಿದ್ದೇಶ್ವರ ಸಂಸ್ಥೆಯ ರಾಮನಗೌಡ ಬಾ.ಪಾಟೀಲ ಯತ್ನಾಳ ಗೋರಕ್ಷಾ ಕೇಂದ್ರದಲ್ಲಿ ಸಿದ್ದಪಡಿಸಲಾದ 5001 ವಿಭೂತಿ, 5 ಕೆ.ಜಿ ಕುಂಕುಮ, 5 ಕೆ.ಜಿ ತುಪ್ಪ ನೀಡಲಾಯಿತು.
ಶ್ರೀ ಸಿದ್ದೇಶ್ವರ ಸಂಸ್ಥೆಯ ಚೇರಮನ್ ಬಸಯ್ಯ ಹಿರೇಮಠ, ಉಪಾಧ್ಯಕ್ಷ ಸಂಗನಬಸಪ್ಪ ಸಜ್ಜನ, ನಿರ್ದೇಶಕರಾದ ಬಸವರಾಜ ಸೂಗೂರ, ಸದಾಶಿವ ಗುಡ್ಡೋಡಗಿ, ಎನ್.ಎಂ.ಗೊಲಾಯಿ, ಮಲ್ಲಿಕಾರ್ಜುನ ಹಕ್ಕಾಪಕ್ಕಿ, ಮಲಕಪ್ಪ ಗಾಣಿಗೇರ, ಸಾಯಿಬಣ್ಣ ಭೋವಿ, ಸಿದ್ಧಸಿರಿ ಸೌಹಾರ್ದ ಸಹಕಾರಿ ಸಂಘ ನಿಯಮಿತದ ನಿರ್ದೇಶಕರಾದ ಪ್ರಭುಗೌಡ ದೇಸಾಯಿ, ಕನಕಗೌಡರ ಆಡಳಿತ ಮಂಡಳಿ ಸದಸ್ಯರು, ಗಣ್ಯರು, ಅಭಿಮಾನಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
ಚಿತ್ರ : ವಿಜಯಪುರ ನಗರ ಶ್ರೀ ಸಿದ್ದೇಶ್ವರ ಸಂಸ್ಥೆ ಹಾಗೂ ಸಿದ್ದಸಿರಿ ಸೌಹಾರ್ದ ಸಹಕಾರಿ ಸಂಘ ನಿಯಮಿತದಿಂದ ಕೊಪ್ಪಳ ನಗರದ ಶ್ರೀ ಗವಿಸಿದ್ದೇಶ್ವರ ಮಠದ ದಾಸೋಹಕ್ಕಾಗಿ 101 ಕ್ವಿಂಟಲ್ ಅಕ್ಕಿ ಹಾಗೂ 5001 ವಿಭೂತಿಗಳನ್ನು ಬುಧವಾರ ನೀಡಲಾಯಿತು.
ಹಿಂದೂಸ್ತಾನ್ ಸಮಾಚಾರ್ / jyothi deshpande