ರಾಜ್ಯದ 36 ಲಕ್ಷ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ : ಸಚಿವ ಸಂತೋಷ ಲಾಡ್
ವಿಜಯಪುರ, 23 ಜುಲೈ (ಹಿ.ಸ.) : ಆ್ಯಂಕರ್: ರಾಜ್ಯದಲ್ಲಿರುವ ನಾನಾ 91 ವರ್ಗಗಳ 36 ಲಕ್ಷ ಅಸಂಘಟಿತ ಕಾರ್ಮಿಕರನ್ನು ಗುರುತಿಸಿ, ಉಚಿತವಾಗಿ ನೋಂದಾಯಿಸಿ ನಾನಾ ಸೌಲಭ್ಯಗಳನ್ನೊಳಗೊಂಡ ಸ್ಮಾರ್ಟ್ ಕಾರ್ಡ್ ವಿತರಿಸುವ ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆಯನ್ನು ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸುವುದಾಗಿ ಕಾರ್ಮಿ
ಸಚಿವ


ವಿಜಯಪುರ, 23 ಜುಲೈ (ಹಿ.ಸ.) :

ಆ್ಯಂಕರ್: ರಾಜ್ಯದಲ್ಲಿರುವ ನಾನಾ 91 ವರ್ಗಗಳ 36 ಲಕ್ಷ ಅಸಂಘಟಿತ ಕಾರ್ಮಿಕರನ್ನು ಗುರುತಿಸಿ, ಉಚಿತವಾಗಿ ನೋಂದಾಯಿಸಿ ನಾನಾ ಸೌಲಭ್ಯಗಳನ್ನೊಳಗೊಂಡ ಸ್ಮಾರ್ಟ್ ಕಾರ್ಡ್ ವಿತರಿಸುವ ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆಯನ್ನು ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸುವುದಾಗಿ ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್ ತಿಳಿಸಿದರು.

ವಿಜಯಪುರ ನಗರದಲ್ಲಿ ಕಾರ್ಡ್ ವಿತರಣೆಗೂ ಮೊದಲು ಕಾಂಗ್ರೆಸ್ ಪಕ್ಷದ ಕಚೇರಿಗೆ ಭೇಟಿ ಕೊಟ್ಟು ಮಾದ್ಯಮಗಳ ಜೊತೆಗೆ ಮಾತನಾಡಿದರು.

ಈ ಸಂದರ್ಭದಲ್ಲಿ ಸಚಿವ ಸಂತೋಷ ಲಾಡ್ ಇವರನ್ನು ಪಕ್ಷದ ಮಹಿಳಾ ಪದಾಧಿಕಾರಿಗಳು ಆರತಿ ಬೆಳಗಿ ಹಣೆಗೆ ತಿಲಕವಿಟ್ಟು ಸ್ವಾಗತಿಸಿದರು.

ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಗೆ ನೀಡಬೇಕೆಂದು ಆಗ್ರಹಿಸಲಾಗಿದೆ. ಅದಕ್ಕೆ ಒಪ್ಪಿಗೆ ದೊರೆತರೆ ₹2,200 ಕೋಟಿ ಸಂಗ್ರಹವಾಗಲಿದ್ದು, ಅದನ್ನು ಸ್ಮಾರ್ಟ್ ಕಾರ್ಡ್ ಫಲಾನುಭವಿಗಳಿಗೆ ನೀಡಲಾಗುವುದು ಎಂದು ಭರವಸೆ ನೀಡಿದರು.

ರಾಜ್ಯದಲ್ಲಿನ ಆರಂಭಿಕವಾಗಿ 26 ವರ್ಗಗಳ ಅಸಂಘಟಿತ ಕಾರ್ಮಿಕರನ್ನು ನೋಂದಾಯಿಸಲಾಗಿತ್ತು. ಹೊಸದಾಗಿ ಹಿಂದುಳಿದ ವರ್ಗಗಳಿಗೆ ಸೇರಿದ ಪಾರಂಪರಿಕ ವೃತ್ತಿಯಲ್ಲಿ ತೊಡಗಿರುವ 38 ವರ್ಗಗಳು ಹಾಗೂ ಹಿಂದುಳಿದ ವರ್ಗಗಳ ಅಲೆಮಾರಿ ಹಾಗೂ ಅರೆಅಲೆಮಾರಿ ಪಂಗಡದ ಕುಲಕಸುಬಿನಲ್ಲಿ ತೊಡಗಿರುವ 27 ವರ್ಗಗಳ ಕಾರ್ಮಿಕರು ಸೇರಿದಂತೆ ಒಟ್ಟು 91 ವರ್ಗಗಳ ಕಾರ್ಮಿಕರನ್ನು ಗುರುತಿಸಿ ಸೌಲಭ್ಯವನ್ನು ನೀಡಲಾಗುತ್ತಿದೆ. ಸಹಾಯವಾಣಿ ಸಂಖ್ಯೆ 155214ಕ್ಕೆ ಕರೆ ಮಾಡಿದರೆ ಸೂಕ್ತ ಮಾಹಿತಿ ಸಿಗುತ್ತದೆ ಎಂದರು.

ಮಾದ್ಯಮಗೋಷ್ಠಿಯಲ್ಲಿ ರಾಜ್ಯ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಮತ್ತಿತರರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande