ಬೆಂಗಳೂರು, 23 ಜುಲೈ (ಹಿ.ಸ.) :
ಆ್ಯಂಕರ್ : ಮಹಾರಾಷ್ಟ್ರದಲ್ಲಿ ನೋಂದಣಿಯಾದ ಐಷಾರಾಮಿ ಕಾರನ್ನು ರಸ್ತೆ ಸಾರಿಗೆ ತೆರಿಗೆ ಪಾವತಿಸದೇ ಕರ್ನಾಟಕದಲ್ಲಿ ಬಳಸುತ್ತಿದ್ದ ಹಿನ್ನೆಲೆಯಲ್ಲಿ, ಉದ್ಯಮಿ ಕೆಜಿಎಫ್ ಬಾಬು ಅವರ ಮನೆ ಮೇಲೆ ಸಾರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೆಂಗಳೂರಿನ ವಸಂತನಗರದಲ್ಲಿರುವ ಅವರ ನಿವಾಸದಲ್ಲಿ ಆರ್‌ಟಿಒ ಜಂಟಿ ಆಯುಕ್ತೆ ಎಂ. ಶೋಭಾ ನೇತೃತ್ವದಲ್ಲಿ ದಾಳಿ ನಡೆದಿದ್ದು, ಮಹಾರಾಷ್ಟ್ರ ನೋಂದಣಿಯ ಕಾರುಗಳು ರಾಜ್ಯದಲ್ಲಿ ಒಂದು ವರ್ಷಕ್ಕಿಂತ ಹೆಚ್ಚು ಕಾಲ ಸಂಚರಿಸಿರುವ ಬಗ್ಗೆ ವಿವರ ಕೇಳಿ, ತಕ್ಷಣ ತೆರಿಗೆ ಪಾವತಿಸುವಂತೆ ಸೂಚಿಸಿದ್ದಾರೆ
ರೋಲ್ಸ್ ರಾಯ್ಸ್, ವೆಲ್ಫೈರ್, ಪೋಶೆ ಸೇರಿದಂತೆ ಹಲವು ಕಾರುಗಳ ಮಾಲೀಕರಾಗಿರುವ ಬಾಬು, “ನಾನು ಕಾನೂನಿಗೆ ಗೌರವ ನೀಡುತ್ತೇನೆ. ವಿವರ ಪಡೆದು ಇಂದೇ ತೆರಿಗೆ ಪಾವತಿಸುತ್ತೇನೆ,” ಎಂದು ಪ್ರತಿಕ್ರಿಯಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa