ಗದಗ, 23 ಜುಲೈ (ಹಿ.ಸ.) :
ಆ್ಯಂಕರ್ : ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆ ಆರಂಭವಾದ ಹಿನ್ನೆಲೆಯಲ್ಲಿ ರಾಜ್ಯದ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಅವರು ಗದಗ ಜಿಲ್ಲಾಧಿಕಾರಿಗಳ ಕಚೇರಿ ಸಭಾಭವನದಲ್ಲಿ ಯುವನಿಧಿ ಪೋಸ್ಟರ್ ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ಬಿ.ಬಿ.ಅಸೂಟಿ, ತಾಲೂಕಾ ಅಧ್ಯಕ್ಷರಾದ ಅಶೋಕ ಮಂದಾಲಿ, ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾದಿಕಾರಿ ಭರತ್ ಎಸ್, ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ಬಸವಂತಪ್ಪ ಸೇರಿದಂತೆ ಇತರರಿದ್ದರು.
ಹಿಂದೂಸ್ತಾನ್ ಸಮಾಚಾರ್ / Lalita M P