ವೇಮಗಲ್ ಕುರುಗಲ್ ಪಟ್ಟಣ ಪಂಚಾಯತಿ ಚುನಾವಣೆ ಕಾಂಗ್ರೆಸ್ ಬೆಂಬಲಿಸಲು ಮನವಿ
ವೇಮಗಲ್ ಕುರುಗಲ್ ಪಟ್ಟಣ ಪಂಚಾಯತಿ ಚುನಾವಣೆ ಕಾಂಗ್ರೆಸ್ ಬೆಂಬಲಿಸಲು ಮನವಿ
ಚಿತ್ರ : ಬೆಟ್ಟಹೊ ಸಪುರ ಜಗನ್


ಕೋಲಾರ, ೨೪ ಜುಲೈ (ಹಿ.ಸ.) :

ಆ್ಯಂಕರ್ : ಕೋಲಾರ ತಾಲೂಕಿನ ವೇಮಗಲ್ ಭಾಗದಲ್ಲಿ ಕೈಗಾರಿಕೆಗಳು ಸ್ಥಾಪನೆ, ಪಟ್ಟಣ ಪಂಚಾಯತಿ ರಚನೆ, ಯೋಜನಾ ಪ್ರಾಧಿಕಾರ, ಹೆಲಿಕಾಪ್ಟರ್ ಘಟಕ ಸೇರಿದಂತೆ ಆನೇಕ ಜನಪರವಾದ ಅಭಿವೃದ್ಧಿಗೆ ಕಾಂಗ್ರೆಸ್ ಪಕ್ಷವು ಕಾರಣವಾಗಿದ್ದು, ವೇಮಗಲ್ ಕುರುಗಲ್ ಪಟ್ಟಣ ಪಂಚಾಯತಿ ಚುನಾವಣೆಯಲ್ಲಿ ಜನ ಕಾಂಗ್ರೆಸ್ ಪಕ್ಷವನ್ನು ಕೈಹಿಡಿಯಬೇಕಾಗಿದೆ ಎಂದು ಬೆಟ್ಟಹೊಸಪುರ ಹಾಗೂ ಮಂಜಲಿ ವಾರ್ಡ್ ನಂ ೨ರ ಕಾಂಗ್ರೆಸ್ ಪಕ್ಷದ ಆಕಾಂಕ್ಷಿ ಜಗನ್ ತಿಳಿಸಿದರು,

ಚುನಾವಣೆಗೆ ಸಂಬಂಧಿಸಿದಂತೆ ಮಾತನಾಡಿದ ಅವರು ಗ್ಯಾರಂಟಿ ಯೋಜನೆ ಮೂಲಕ ಸಾವಿರಾರು ಕೋಟಿ ಮೊತ್ತದ ಯೋಜನೆಗಳನ್ನು ಜನರ ಬಾಗಿಲಿಗೆ ತಲುಪಿಸಲಾಗಿದೆ. ಇನ್ನೂ ಹೆಚ್ಚಿನ ಅಭಿವೃದ್ಧಿ ಪರವಾದ ಯೋಜನೆಗಳಿಗಾಗಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಪಟ್ಟಣ ಪಂಚಾಯತಿ ಚುನಾವಣೆಯಲ್ಲಿ ಬೆಂಬಲಿಸುವ ಮೂಲಕ ಶಾಸಕ ಕೊತ್ತೂರು ಮಂಜುನಾಥ್ ಮತ್ತು ಎಂಎಲ್ಸಿಗಳಾದ ನಸೀರ್ ಅಹಮದ್, ಅನಿಲ್ ಕುಮಾರ್, ಮಾಜಿ ಸಭಾಪತಿ ವಿ.ಆರ್ ಸುದರ್ಶನ್ ಅವರ ಅಭಿವೃದ್ಧಿ ಪರವಾದ ಆಡಳಿತಕ್ಕೆ ಕೈಜೋಡಿಸಬೇಕಾಗಿದೆ ಎಂದು ಮನವಿ ಮಾಡಿದರು.

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ನಂತರ ಹಸಿವು ಮುಕ್ತ ಕರ್ನಾಟಕವೇ ಗುರಿಯಾಗಿದೆ ಅದೇ ಹಾದಿಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಅವರ ನೇತೃತ್ವದ ಸರ್ಕಾರದಿಂದ ಮಾತ್ರವೇ ಸಾಧ್ಯವಾಗಿದೆ ರಾಜ್ಯದ ಜನ ನೆಮ್ಮದಿಯಿಂದ ಜೀವನ ನಡೆಸುವಂತೆ ಮಾಡಿದ್ದು ಕಾಂಗ್ರೆಸ್ ಪಕ್ಷದಿಂದ ಸಾಧ್ಯವಾಗಿದೆ ಮುಂದಿನ ಪ್ರತಿಯೊಂದು ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುಲು ಜಗನ್ ಮನವಿ ಮಾಡಿದರು.

ಚಿತ್ರ : ಬೆಟ್ಟಹೊಸಪುರ ಜಗನ್

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande