ಉತ್ತಮ ಸೇವೆ ಸಲ್ಲಿಸಿದ ಹಿರಿಯ ನಾಗರಿಕರ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ
ಗದಗ, 24 ಜುಲೈ (ಹಿ.ಸ.) : ಆ್ಯಂಕರ್ : ಸರ್ಕಾರದ ಆದೇಶದನ್ವಯ ದಿನಾಂಕ:01/10/2025 ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ರಾಜ್ಯಮಟ್ಟದಲ್ಲಿ ಆಚರಿಸುವ ಸಂದರ್ಭದಲ್ಲಿ ಹಿರಿಯ ನಾಗರಿಕರ ಶಿಕ್ಷಣ ಕ್ಷೇತ್ರ, ಸಾಹಿತ್ಯ ಕ್ಷೇತ್ರ, ಕಲೆ, ಕಾನೂನು, ಪ್ರತಿಭೆ/ಕ್ರೀಡೆ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲ
ಪೋಟೋ


ಗದಗ, 24 ಜುಲೈ (ಹಿ.ಸ.) :

ಆ್ಯಂಕರ್ : ಸರ್ಕಾರದ ಆದೇಶದನ್ವಯ ದಿನಾಂಕ:01/10/2025 ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ರಾಜ್ಯಮಟ್ಟದಲ್ಲಿ ಆಚರಿಸುವ ಸಂದರ್ಭದಲ್ಲಿ ಹಿರಿಯ ನಾಗರಿಕರ ಶಿಕ್ಷಣ ಕ್ಷೇತ್ರ, ಸಾಹಿತ್ಯ ಕ್ಷೇತ್ರ, ಕಲೆ, ಕಾನೂನು, ಪ್ರತಿಭೆ/ಕ್ರೀಡೆ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸಮಾಜ ಸೇವೆ ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ 06 ವೈಯಕ್ತಿಕ ಪ್ರಶಸ್ತಿಗಳನ್ನು ಹಾಗೂ ಹಿರಿಯ ನಾಗರಿಕ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ 01 ಸಂಸ್ಥೆಗೆ ಪ್ರಶಸ್ತಿ ಒಟ್ಟು 07 ಪ್ರಶಸ್ತಿಗಳನ್ನು ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಜಿಲ್ಲಾ ವ್ಯಾಪ್ತಿಯಲ್ಲಿ ಅರ್ಹ ಹಿರಿಯ ನಾಗರಿಕರು ಹಾಗೂ ಹಿರಿಯ ನಾಗರಿಕ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗಳಿAದ ನಿಗದಿತ 1 & 2ರ ನಮೂನೆಯ ಎಲ್ಲಾ ಕಲಂಗಳನ್ನು ಕನ್ನಡ ಭಾಷೆಯಲ್ಲಿ ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ ದಿನಾಂಕ:25/08/2025ರ ಒಳಗಾಗಿ ದ್ವಿಪ್ರತಿಯಲ್ಲಿ ಪ್ರಸ್ತಾವನೆಯನ್ನು ವಿಕಲಚೆತನರ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ ಗದಗಗೀ ಕಛೇರಿಗೆ ಸಲ್ಲಿಸಲು ತಿಳಿಸಿದೆ ಹಾಗೂ ಅವಧಿ ಮೀರಿಬಂದ ಪ್ರಸ್ತಾವನೆಯನ್ನು ರದ್ದು ಪಡಿಸಲಾಗುವುದು .

ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆ: 08372-220419 ಗೆ ಕಛೇರಿಯ ವೇಳೆಯಲ್ಲಿ ಸಂಪರ್ಕಿಸಲು ಕೋರಿದೆ. ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಕೆ. ಮಹಾಂತೇಶ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande