ಹಿರಿಯ ನಾಗರಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
ಕೊಪ್ಪಳ, 24 ಜುಲೈ (ಹಿ.ಸ.) : ಆ್ಯಂಕರ್ : ವಿಕಲಚೇತರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಶ್ವ ಹಿರಿಯ ನಾಗರಿಕರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಯವರ ತಿಳಿಸಿದೆ. ಅಕ್ಟೋಬರ್ 1 ರಂದು ನಡೆಯುವ ವಿಶ್ವ ಹಿರಿಯ ನಾಗರಿಕರ ದಿನಾಚಾರಣೆ ಸಂ
ಹಿರಿಯ ನಾಗರಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ


ಕೊಪ್ಪಳ, 24 ಜುಲೈ (ಹಿ.ಸ.) :

ಆ್ಯಂಕರ್ : ವಿಕಲಚೇತರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಶ್ವ ಹಿರಿಯ ನಾಗರಿಕರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಯವರ ತಿಳಿಸಿದೆ.

ಅಕ್ಟೋಬರ್ 1 ರಂದು ನಡೆಯುವ ವಿಶ್ವ ಹಿರಿಯ ನಾಗರಿಕರ ದಿನಾಚಾರಣೆ ಸಂದರ್ಭದಲ್ಲಿ ಶಿಕ್ಷಣ, ಸಾಹಿತ್ಯ, ಕಲೆ, ಕಾನೂನು, ಪ್ರತಿಭೆ ಅಥವಾ ಕ್ರೀಡೆ ಮತ್ತು ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸಮಾಜ ಸೇವೆಯನ್ನು ಒಳಗೊಂಡಂತೆ ಗಣನೀಯ ಸೇವೆ ಸಲ್ಲಿಸಿದ 6 ಹಿರಿಯ ನಾಗರಿಕರಿಗೆ ವ್ಯಯಕ್ತಿಕ ಪ್ರಶಸ್ತಿಗಳನ್ನು ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ 1 ಸಂಸ್ಥೆಗೆ ಸೇರಿ ಒಟ್ಟು 7 ಪ್ರಶಸ್ತಿಗಳನ್ನು ರಾಜ್ಯ ಮಟ್ಟದಲ್ಲಿ ನೀಡಲಾಗುತ್ತಿದ್ದು, ಕೊಪ್ಪಳ ಜಿಲ್ಲಾ ವ್ಯಾಪ್ತಿಯಲ್ಲಿ ಗಣನೀಯವಾಗಿ ಸೇವೆ ಸಲ್ಲಿಸಿದ ಹಿರಿಯ ನಾಗರಿಕರು ಮತ್ತು ಅರ್ಹ ಸಂಸ್ಥೆಗಳು ಅರ್ಜಿ ಸಲ್ಲಿಸಬಹುದು.

ಆಸಕ್ತ ಹಿರಿಯ ನಾಗರಿಕರು ಮತ್ತು ಅರ್ಹ ಸಂಸ್ಥೆಗಳು ವಿಕಲಚೇತರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕೊಪ್ಪಳ ಕಛೇರಿಯಿಂದ ಪಡೆದು ನಿಗದಿತ ನಮೂನೆಯಲ್ಲಿ ಕನ್ನಡ ಭಾμÉಯಲ್ಲಿ ಭರ್ತಿ ಮಾಡಿ ಪ್ರಸ್ತಾವನೆಗಳನ್ನು ದ್ವಿಪ್ರತಿಯಲ್ಲಿ ಆಗಸ್ಟ್ 25ರೊಳಗೆ ಕೊಪ್ಪಳ ನಗರದ ಹೊಸಪೇಟ್ ರಸ್ತೆಯ ರಿಲಾಯನ್ಸ್ ಪೆಟ್ರೋಲ್ ಬಂಕ್ ಎದುರುಗಡೆಯ ನಗರಾಭಿವೃದ್ಧಿ ಪ್ರಾಧಿಕಾರ ಕಾರ್ಯಾಲಯ ಆವರಣದಲ್ಲಿರುವ ಕೊಠಡಿ ಸಂಖ್ಯೆ 31.32ರ ಕೊಪ್ಪಳ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿಗೆ ಕಛೇರಿ ಅವಧಿಯಲ್ಲಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08539-295496 ಗೆ ಸಂಪರ್ಕಿಸಬಹುದು

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande