ಜಿಲ್ಲಾ ಸಫಾಯಿ ಕರ್ಮಚಾರಿಗಳ ಜಾಗೃತಿ ಸಮಿತಿ ರಚಿಸಲು ಅರ್ಜಿ ಆಹ್ವಾನ
ಕೊಪ್ಪಳ, 24 ಜುಲೈ (ಹಿ.ಸ.) : ಆ್ಯಂಕರ್ : ಸಮಾಜ ಕಲ್ಯಾಣ ಇಲಾಖೆಯಿಂದ ಕೊಪ್ಪಳ ಜಿಲ್ಲಾ ಮಟ್ಟದ ಸಫಾಯಿ ಕರ್ಮಚಾರಿಗಳ ಜಾಗೃತ ಸಮಿತಿ (ವಿಜಿಲೆನ್ಸ) ರಚಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮ್ಯಾನ್ಯುವಲ್ ಸ್ಕ್ಯಾವೆಂಜರ್‍ಗಳ ನೇಮಕಾತಿ ನಿಷೇಧ ಮತ್ತು ಅವರ ಪುನರ್ವಸತಿ ಕಾಯ್ದೆ-2013ರ ಸೆಕ್
ಜಿಲ್ಲಾ ಸಫಾಯಿ ಕರ್ಮಚಾರಿಗಳ ಜಾಗೃತಿ ಸಮಿತಿ ರಚಿಸಲು ಅರ್ಜಿ ಆಹ್ವಾನ


ಕೊಪ್ಪಳ, 24 ಜುಲೈ (ಹಿ.ಸ.) :

ಆ್ಯಂಕರ್ : ಸಮಾಜ ಕಲ್ಯಾಣ ಇಲಾಖೆಯಿಂದ ಕೊಪ್ಪಳ ಜಿಲ್ಲಾ ಮಟ್ಟದ ಸಫಾಯಿ ಕರ್ಮಚಾರಿಗಳ ಜಾಗೃತ ಸಮಿತಿ (ವಿಜಿಲೆನ್ಸ) ರಚಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಮ್ಯಾನ್ಯುವಲ್ ಸ್ಕ್ಯಾವೆಂಜರ್‍ಗಳ ನೇಮಕಾತಿ ನಿಷೇಧ ಮತ್ತು ಅವರ ಪುನರ್ವಸತಿ ಕಾಯ್ದೆ-2013ರ ಸೆಕ್ಷನ್-24ರ ಪ್ರಕಾರ ಜಿಲ್ಲೆಯಲ್ಲಿ ಮ್ಯಾನ್ಯುವಲ್ ಸ್ಕ್ಯಾವೆಂಜರ್‍ಗಳ ಕೆಲಸವನ್ನು ನಿಷೇಧಿಸುವುದಕ್ಕಾಗಿ ಮತ್ತು ಮ್ಯಾನ್ಯುಯಲ್ ಸ್ಕ್ಯಾವೆಂಜರ್‍ಗಳ ಪುನರ್ವಸತಿಗಾಗಿ ಕೆಲಸ ಮಾಡುತ್ತಿರುವವರನ್ನು ಒಳಗೊಂಡು ಸಫಾಯಿ ಕರ್ಮಚಾರಿಗಳ ಕೊಪ್ಪಳ ಜಿಲ್ಲಾ ಮಟ್ಟದ ಜಾಗೃತ ಸಮಿತಿ (ವಿಜಿಲೆನ್ಸ್ ಕಮಿಟಿ)ಗೆ 4 ಜನ ನಾಮನಿರ್ದೇಶಿತ (2 ಪುರುಷ ಹಾಗೂ 2 ಮಹಿಳಾ) ಸದಸ್ಯರನ್ನು ನೇಮಕ ಮಾಡಬೇಕಾಗಿದೆ.

ಅರ್ಜಿ ಸಲ್ಲಿಸಲು ಆಗಸ್ಟ್ 6 ಕೊನೆಯ ದಿನಾಂಕವಾಗಿದ್ದು, ನಿಗದಿತ ಅರ್ಜಿ ನಮೂನೆಯನ್ನು ಕೊಪ್ಪಳ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಛೇರಿ ಅಥವಾ ಕೊಪ್ಪಳ, ಗಂಗಾವತಿ, ಕುಷ್ಟಗಿ, ಯಲಬುರ್ಗಾ ತಾಲ್ಲೂಕುಗಳ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಛೇರಿಯಿಂದ ಕೊಪ್ಪಳ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು ಎಂದು ಜಿಲ್ಲಾ ಮಟ್ಟದ ಸಫಾಯಿ ಕರ್ಮಚಾರಿಗಳ ಜಾಗೃತಿ ಸಮಿತಿಯ ಸದಸ್ಯ ಕಾರ್ಯದರ್ಶಿಗಳಾದ ಕೊಪ್ಪಳ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande