ಆಗಸ್ಟ್ 8 ರಿಂದ ಸೇನಾ ನೇಮಕಾತಿ ರ‍್ಯಾಲಿ
ರಾಯಚೂರು , 24 ಜುಲೈ (ಹಿ.ಸ.) : ಆ್ಯಂಕರ್ : ನಗರದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಆಗಸ್ಟ್ 8 ರಿಂದ 22ರವರೆಗೆ ನಡೆಯುವ ಸೇನಾ ನೇಮಕಾತಿ ರ‍್ಯಾಲಿ ಯಲ್ಲಿ ರಾಜ್ಯದ ಜಿಲ್ಲೆಗಳಿಂದ ಅಂದಾಜು 15,000 ಅಭ್ಯರ್ಥಿಗಳು ಭಾಗವಹಿಸಲಿದ್ದು, ರ‍್ಯಾಲಿ ಯನ್ನು ಯಶಸ್ವಿಗೊಳಿಸುವ ಹಿನ್ನೆಲೆಯಲ್ಲಿ ಜಿ
ಆಗಸ್ಟ್ 8 ರಿಂದ ಸೇನಾ ನೇಮಕಾತಿ ರ‍್ಯಾಲಿ


ರಾಯಚೂರು , 24 ಜುಲೈ (ಹಿ.ಸ.) :

ಆ್ಯಂಕರ್ : ನಗರದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಆಗಸ್ಟ್ 8 ರಿಂದ 22ರವರೆಗೆ ನಡೆಯುವ ಸೇನಾ ನೇಮಕಾತಿ ರ‍್ಯಾಲಿ ಯಲ್ಲಿ ರಾಜ್ಯದ ಜಿಲ್ಲೆಗಳಿಂದ ಅಂದಾಜು 15,000 ಅಭ್ಯರ್ಥಿಗಳು ಭಾಗವಹಿಸಲಿದ್ದು, ರ‍್ಯಾಲಿ ಯನ್ನು ಯಶಸ್ವಿಗೊಳಿಸುವ ಹಿನ್ನೆಲೆಯಲ್ಲಿ ಜಿಲ್ಲಾ ಮಟ್ಟದ ಇಲಾಖೆಗಳನ್ನೊಳಗೊಂಡು ಸಮಿತಿಗಳನ್ನು ರಚಿಸಿ ಅಧಿಕಾರಿ ಹಾಗೂ ಸಿಬ್ಬಂದಿಗೆ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ಜವಾಬ್ದಾರಿ ಹಂಚಿಕೆ ಮಾಡಿದ್ದಾರೆ.

ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಅಧ್ಯಕ್ಷತೆಯಲ್ಲಿ 10 ಜನ ಅಧಿಕಾರಿಗಳ ವೇದಿಕೆ ಸಮಿತಿ ರಚಿಸಿದ್ದು, ವೇದಿಕೆ, ಪೆಂಡಾಲ ನಿರ್ಮಾಣ, ವೇದಿಕೆ ಮುಂಭಾಗ ಆಸನ ವ್ಯವಸ್ಥೆ, ವಿದ್ಯುತ್ ದೀಪಗಳ ವ್ಯವಸ್ಥೆ, ಮೈದಾನದಲ್ಲಿ ಬ್ಯಾರಿಕೇಡ್ ವ್ಯವಸ್ಥೆ, ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ವಿದ್ಯುತ್ ದೀಪಗಳು ಮತ್ತು ಜನರೇಟರ್ ವ್ಯವಸ್ಥೆ, ಆಸನ, ಕುರ್ಚಿಗಳು, ಟೇಬಲ್‍ಗಳು, ಮೈಕ್‍ಸೆಟ್, ಖಾಟ್ ಮತ್ತು ಹಾಸಿಗೆ ಹಾಗೂ ತ್ಯಾಜ್ಯದ ತೊಟ್ಟಿಗಳ ವ್ಯವಸ್ಥೆ, ಬಿಎಸ್‍ಎನ್‍ಎಲ್ ಬ್ರಾಡ್‍ಬ್ಯಾಂಡ್ ಇಂಟರ್ನೆಟ್ ಜೊತೆಗೆ ವೈಫೈ ಮತ್ತು ಟೆಲಿಫೆÇೀನ್, ಎಲ್‍ಎಎನ್ ಸಂಪರ್ಕ, ಫೈಬರ್ ಕೇಬಲ್ ಜೊತೆಗೆ ಟೆಕ್ನಿಕಲ್ ವ್ಯವಸ್ಥೆ ಕಲ್ಪಿಸುವುದು, ಸಿಸಿಟಿವಿ ಅಳವಡಿಕೆ ವ್ಯವಸ್ಥೆಯ ಜವಾಬ್ದಾರಿ ವಹಿಸಲಾಗಿದೆ. ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರು ಈ ಸಮಿತಿಗೆ ಸದಸ್ಯ ಕಾರ್ಯದರ್ಶಿಯಾಗಿದ್ದಾರೆ.

ಪೊಲೀಸ್ ಅಧೀಕ್ಷಕರ ಅಧ್ಯಕ್ಷತೆಯಲ್ಲಿ ಭದ್ರತಾ ಸಮಿತಿ ರಚಿಸಿದ್ದು, ರ‍್ಯಾಲಿ ಗೆ ಆಗಮಿಸುವ ಎಲ್ಲಾ ಅಭ್ಯರ್ಥಿಗಳಿಗೆ ಹಾಗೂ ಇತರರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಸೂಕ್ತ ರಕ್ಷಣಾ ವ್ಯವಸ್ಥೆ ಕಲ್ಪಿಸುವುದು. ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಜನಸಂದಣಿ ನಿರ್ವಹಣೆ ಮಾಡುವುದು. ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಹೊರಗಡೆ ಹಾಗೂ ಮುಂಭಾಗದಲ್ಲಿ ಬ್ಯಾರಿಕೇಡ್‍ಗಳನ್ನು ಹಾಕಿ ಸಾರ್ವಜನಿಕ ರಸ್ತೆ ಸಂಚಾರಕ್ಕೆ ತೊಂದರೆಯಾಗದಂತೆ ಕ್ರಮ ವಹಿಸುವುದು. ವಿಶ್ವವಿದ್ಯಾಲಯದ ಮುಂಭಾಗದಲ್ಲಿ ವಾಹನಗಳ ಸಂಚಾರ ದಟ್ಟಣೆ ಆಗದಂತೆ ಕ್ರಮ ವಹಿಸುವುದು ಮತ್ತು ಎಲ್ಲಾ ರೀತಿಯ ವಾಹನಗಳಿಗೆ ಸೂಕ್ತ ಪಾಕಿರ್ಂಗ್ ವ್ಯವಸ್ಥೆ ಮತ್ತು ಅಗ್ನಿಶಾಮಕ ವಾಹನ ಮತ್ತು ತುರ್ತು ಸೇವೆಗಳ ಒದಗಿಸುವ ಜವಾಬ್ದಾರಿ ಹಂಚಿಕೆ ಮಾಡಲಾಗಿದೆ. ಈ ಸಮಿತಿಗೆ ಜಿಲ್ಲಾ ಪೆÇೀಲಿಸ್ ಉಪ ಅಧೀಕ್ಷಕರು ಸದಸ್ಯ ಕಾರ್ಯಾದರ್ಶಿಯಾಗಿದ್ದಾರೆ.

ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತರ ಅಧ್ಯಕ್ಷತೆಯಲ್ಲಿ ಮೂಲಭೂತ ಸೌಕರ್ಯ ಸಮಿತಿ ರಚಿಸಲಾಗಿದ್ದು, ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಸೇನಾ ನೇಮಕಾತಿ ರ್ಯಾಲಿ ಯಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಕುಡಿಯುವ ನೀರಿಗಾಗಿ ನಳಗಳ ಮತ್ತು ನೀರಿನ ವ್ಯವಸ್ಥೆ ಒದಗಿಸುವುದು. ಸಿಬ್ಬಂದಿಗೆ ಕುಡಿಯುವ ನೀರಿನ ಬಾಟಲಿ ಕೊಡುವುದು, ಮೊಬೈಲ್ ಶೌಚಾಲಯಗಳ ವ್ಯವಸ್ಥೆ, ಅವುಗಳಿಗೆ ಟ್ಯಾಂಕರ್ ಮೂಲಕ ನೀರನ್ನು ಒದಗಿಸುವುದು, ವಿಶ್ವವಿದ್ಯಾಲಯದ ಆವರಣ ಸ್ವಚ್ಛಗೊಳಿಸುವುದು ಹಾಗೂ ಸುತ್ತಲಿನ ಪ್ರದೇಶದಲ್ಲಿನ ತ್ಯಾಜ್ಯ ವಸ್ತುಗಳ ವೀಲೆ ಮಾಡುವ ಜವಾಬ್ದಾರಿ ವಹಿಸಲಾಗಿದೆ. ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತದ ಕಾರ್ಯನಿರ್ವಾಹಕ ಅಭಿಯಂತರರು ಈ ಸಮಿತಿಯ ಸದಸ್ಯ ಕಾರ್ಯದರ್ಶಿಯಾಗಿದ್ದಾರೆ.

ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಾರಿಗೆ ಸಮಿತಿಯನ್ನು ರಚಿಸಲಾಗಿದೆ. ಸೇನಾ ನೇಮಕಾತಿ ಸಂಬಂಧ ಆಗಮಿಸುವ ಅಭ್ಯರ್ಥಿಗಳಿಗೆ ವಸತಿಗಾಗಿ ತಂಗು ಸ್ಥಳಗಳಿಂದ (ಹಾಸ್ಟೆಲ್) ಅಥವಾ ಬಸ್ ನಿಲ್ದಾಣಗಳಿಂದ ರ್ಯಾಲಿ ನಡೆಯುವ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯಕ್ಕೆ ಬಸ್‍ಗಳ ವ್ಯವಸ್ಥೆ ಕಲ್ಪಿಸುವ ಜವಾಬ್ದಾರಿ ವಹಿಸಲಾಗಿದೆ. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಈ ಸಮಿತಿಗೆ ಸದಸ್ಯ ಕಾರ್ಯದರ್ಶಿಯಾಗಿದ್ದಾರೆ.

ಆಹಾರ ಹಾಗೂ ನಾಗರೀಕ ಸರಬರಾಜು ಇಲಾಖೆಯ ಉಪ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಸೇನಾ ರ‍್ಯಾಲಿ ಯಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ವಸತಿ ಮತ್ತು ಆಹಾರ ಸಮಿತಿ ರಚಿಸಲಾಗಿದೆ. ಸೇನಾ ನೇಮಕಾತಿ ರ‍್ಯಾಲಿ ಗೆ ಆಗಮಿಸುವ ಅಭ್ಯರ್ಥಿಗಳಿಗೆ ವಸತಿ ಮತ್ತು ಊಟದ ವ್ಯವಸ್ಥೆ ಕಲ್ಪಿಸುವ ಜವಾಬ್ದಾರಿ ವಹಿಸಲಾಗಿದೆ. ಅರಕೇರಾ ತಹಶೀಲ್ದಾರರು ಈ ಸಮಿತಿಯ ಸದಸ್ಯ ಕಾರ್ಯದರ್ಶಿಯಾಗಿದ್ದಾರೆ.

ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಅಧ್ಯಕ್ಷತೆಯಲ್ಲಿ ಸೇನಾ ಸಿಬ್ಬಂದಿಗೆ ವಸತಿ ಸಮಿತಿ ರಚಿಸಲಾಗಿದೆ. ಈ ರ‍್ಯಾಲಿ ಯಲ್ಲಿ ಭಾಗವಹಿಸುವ ಸೇನಾ ಸಿಬ್ಬಂದಿಗೆ ವಸತಿ ಮತ್ತು ಊಟದ ವ್ಯವಸ್ಥೆ ಕಲ್ಪಿಸುವ ಜವಾಬ್ದಾರಿ ವಹಿಸಲಾಗಿದೆ. ಮಾಜಿ ಸೈನಿಕರಾದ ಚನ್ನರೆಡ್ಡಿ ಅವರು ಈ ಸಮಿತಿಯ ಸದಸ್ಯ ಕಾರ್ಯದರ್ಶಿಯಾದ್ದಾರೆ.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಆರೋಗ್ಯ ಸಮಿತಿಯನ್ನು ರಚಿಸಲಾಗಿದ್ದು, ವೈದ್ಯರು ಮತ್ತು ಶುಶ್ರೂಷ ಸಹಾಯಕಿಯರ ಸಿಬ್ಬಂದಿಯನ್ನು ಅಗತ್ಯಕ್ಕೆ ಅನುಗುಣವಾಗಿ ನಿಯೋಜಿಸುವುದು. ಅವಶ್ಯಕ ಹಾಗೂ ಜೀವರಕ್ಷಕ ಔಷಧಿಗಳ ವ್ಯವಸ್ಥೆ ಒದಗಿಸುವುದು. ದಿನವಿಡಿ ಆರೋಗ್ಯ ಸೇವೆ ಒದಗಿಸುವುದು. ಬೆಳಿಗ್ಗೆ 05 ರಿಂದ ದಿನದ ಕಾರ್ಯಕ್ರಮ ಪೂರ್ವವಾಗುವವರೆಗೂ ಎಲ್ಲಾ ಸೌಲಭ್ಯದೊಂದಿಗೆ ಅಂಬುಲೈನ್ಸ್ ವಾಹನ ಸಿದ್ಧವಾಗಿಟ್ಟುಕೊಳ್ಳುವುದು. ಆಹಾರ ಗುಣಮಟ್ಟ ಪರಿಶೀಲನೆ ಮಾಡುವ ಜವಾಬ್ದಾರಿ ವಹಿಸಲಾಗಿದೆ. ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆಯ ಅಂಕಿತ ಅಧಿಕಾರಿಗಳು ಈ ಸಮಿತಿಯ ಸದಸ್ಯ ಕಾರ್ಯದರ್ಶಿಯಾಗಿದ್ದಾರೆ.

ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಪ್ರಚಾರ ಮತ್ತು ಮಾಧ್ಯಮ ಸಮಿತಿಯನ್ನು ರಚಿಸಲಾಗಿದೆ. ಪ್ರತಿ ದಿನ ರ‍್ಯಾಲಿ ಯಲ್ಲಿ ನಡೆಯುವ ಮಾಹಿತಿಯನ್ನು ಕಲೆ ಹಾಕುವುದು ಮತ್ತು ವಾರ್ತಾ ಇಲಾಖೆಗೆ ಒದಗಿಸುವುದು ಮತ್ತು ಅಭ್ಯರ್ಥಿಗಳ ಅನುಕೂಲಕ್ಕಾಗಿ ರ‍್ಯಾಲಿ ಯಲ್ಲಿ ನಡೆಯುವ ಮಾಹಿತಿಯನ್ನು ಎಲ್ಲಾ ಪ್ರಮುಖ ಪತ್ರಿಕೆಗಳಲ್ಲಿ ಪ್ರಚುರಪಡಿಸುವ ಜವಾಬ್ದಾರಿ ಹಂಚಿಕೆ ಮಾಡಲಾಗಿದೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು ಈ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಮತ್ತು ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸಮಿತಿಯ ಸದಸ್ಯರಾಗಿದಾರೆ.

ಜೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರರು ಅಧ್ಯಕ್ಷತೆಯಲ್ಲಿ ಮತ್ತು ಜೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರ ಸದಸ್ಯ ಕಾರ್ಯದರ್ಶಿಯನ್ನಾಗಿ ವಿದ್ಯುತ್ ಸರಬರಾಜು ಸಮಿತಿ ರಚಿಸಿದ್ದು, ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯಲ್ಲಿ ನಡೆಯುವ ಸೇನಾ ನೇಮಕಾತಿ ರ‍್ಯಾಲಿ ಮುಗಿಯುವವರೆಗೆ ಯಾವುದೇ ರೀತಿ ವಿದ್ಯುತ್ ವ್ಯತ್ಯಯ ಆಗದ ರೀತಿಯಲ್ಲಿ ಸೂಕ್ತ ವ್ಯವಸ್ಥೆ ಮಾಡುವ ಜವಾಬ್ದಾರಿ ಹಂಚಿಕೆ ಮಾಡಲಾಗಿದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯ ಉಪ ನಿರ್ದೇಶಕರ ಅಧ್ಯಕ್ಷತೆಯಲ್ಲಿ ದಾಖಲಾತಿ ಪರಿಶೀಲನಾ ಸಮಿತಿ ರಚಿಸಲಾಗಿದೆ. ರ‍್ಯಾಲಿ ಯಲ್ಲಿ ಅಭ್ಯರ್ಥಿಗಳು ಸಲ್ಲಿಸುವ ದಾಖಲಾತಿಗಳನ್ನು ಪಡೆದು ಅವುಗಳನ್ನು ಪರಿಶೀಲಿಸಿ ಸಂಬಂಧಪಟ್ಟ ಸೇನಾ ಸಿಬ್ಬಂದಿಗೆ ವರದಿ ನೀಡುವ ಜವಾಬ್ದಾರಿ ವಹಿಸಲಾಗಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಈ ಸಮಿತಿಯ ಸದಸ್ಯ ಕಾರ್ಯದರ್ಶಿಗಳಾಗಿದ್ದಾರೆ.

ರಾಯಚೂರು ತಹಶೀಲ್ದಾರರು, ರಾಯಚೂರು ಕ್ಷೇತ್ರ ಶಿಕ್ಷಣಾಧಿಕಾರಿಗಳು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಈ ಸಮಿತಿಯ ಸದಸ್ಯರಾಗಿದ್ದಾರೆ.

ರಾಯಚೂರು ಮಹಾನಗರ ಪಾಲಿಕೆ ಸಂತೋಷ ರಾಣಿ ಅವರ ಅಧ್ಯಕ್ಷತೆಯಲ್ಲಿ ಸ್ವಚ್ಛತಾ ಸಮಿತಿ ರಚಿಸಲಾಗಿದೆ. ಮಹಾನಗರ ಪಾಲಿಕೆಯ ಪರಿಸರ ಅಭಿಯಂತರರು ಮತ್ತು ಮಹಾನಗರ ಪಾಲಿಕೆ ನೈರ್ಮಲ್ಯ ನಿರೀಕ್ಷಕರು ಈ ಸಮಿತಿಯ ಸದಸ್ಯ ಕಾರ್ಯದರ್ಶಿ ಮತ್ತು ಸದಸ್ಯರಾಗಿದ್ದಾರೆ.

ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ನಡೆಯುವ ಸೇನಾ ನೇಮಕಾತಿ ರ‍್ಯಾಲಿ ಮುಗಿಯುವವರೆಗೆ ಸ್ವಚ್ಛತಾ ಕಾರ್ಯ ಕೈಗೊಳ್ಳಲು ಸಿಬ್ಬಂದಿಯನ್ನು ನಿಯೋಜಿಸಿ ಸೂಕ್ತ ವ್ಯವಸ್ಥೆ ಮಾಡಲು ಈ ಸಮಿತಿಗೆ ಜವಾಬ್ದಾರಿ ವಹಿಸಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande