ಧಾರವಾಡ, 24 ಜುಲೈ (ಹಿ.ಸ.) :
ಆ್ಯಂಕರ್ : ಧಾರವಾಡ ಜಿಲ್ಲೆಯ ಕುಂದಗೋಳ ತಾಲ್ಲೂಕಿನ ಹಿರೇಹರಕುಣಿ, ಮುತ್ತಿಗಟ್ಟಿ ಮತ್ತು ರಾಮನಕೊಪ್ಪ ಗ್ರಾಮ ಪಂಚಾಯಿತಿಗಳಿಗೆ ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ್ ಪಾಟೀಲ್ ಭೇಟಿ ನೀಡಿ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು.
ಹಿರೇಹರಕುಣಿ ಗ್ರಾಮದಲ್ಲಿ ನರೇಗಾ ಯೋಜನೆಯಡಿಯಲ್ಲಿ ಶಾಲಾ ಅಭಿವೃದ್ಧಿ ಹಾಗೂ ಜಲಜೀವನ್ ಮಿಷನ್ ನೀರು ಸರಬರಾಜು ಯೋಜನೆಗಳ ಬಗ್ಗೆ ಮಾಹಿತಿ ಪಡೆದರು. ಚಿಕ್ಕಹರಕುಣಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ವೀಕ್ಷಿಸಿದರು.
ಸಿಇಒ ಅವರು ಗ್ರಾಮೀಣ ಕುಡಿಯುವ ನೀರು ಯೋಜನೆಯಡಿ ಮನೆಗಳಿಗೆ ಒದಗಿಸಿರುವ ನೀರಿನ ಸಂಪರ್ಕದ ಗುಣಮಟ್ಟ, ನೀರಿನ ಮೀಟರ್‌ಗಳ ಸ್ಥಾಪನೆ, ಪೈಪ್ಲೈನ್ ಕಾಮಗಾರಿ ನಂತರದ ರಸ್ತೆ ಪುನರ್ ಸ್ಥಾಪನೆ, ಹಾಗೂ ಫೀಲ್ಡ್ ಟೆಸ್ಟ್ ಕಿಟ್‌ಗಳ ಮೂಲಕ ನೀರಿನ ಗುಣಮಟ್ಟ ಪರೀಕ್ಷೆ ಕುರಿತಂತೆ ಪರಿಶೀಲನೆ ನಡೆಸಿದರು. ಜೊತೆಗೆ ವಿಡಬ್ಲ್ಯೂಎಸ್ಸಿ ಸಮಿತಿಗಳ ಕಾರ್ಯನಿರ್ವಹಣೆ ಕುರಿತ ವರದಿಗಳನ್ನೂ ಪರಿಶೀಲಿಸಿದರು.
ಮುತ್ತಿಗಟ್ಟಿ ಗ್ರಾಮದಲ್ಲಿ ಸರ್ಕಾರಿ ಶಾಲೆಗೆ ಭೇಟಿ ನೀಡಿದ ಸಿಇಒ ಅವರು ಮಕ್ಕಳೊಂದಿಗೆ ಮಧ್ಯಾಹ್ನದ ಬಿಸಿಯೂಟ ಸವಿದರು. ಅಡುಗೆ ಸಿಬ್ಬಂದಿಗೆ ಸ್ವಚ್ಛತೆ ಹಾಗೂ ಪೌಷ್ಟಿಕ ಆಹಾರದ ಮಹತ್ವ ಸೂಚಿಸಿದರು. ಶಿಕ್ಷಕರು ಗುಣಮಟ್ಟದ ಶಿಕ್ಷಣಕ್ಕಾಗಿ ಶ್ರಮಿಸಬೇಕೆಂದು ಸೂಚನೆ ನೀಡಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa