ಮಹತ್ವದ ಯೋಜನೆಗಳಿಗೆ ಸಚಿವ ಸಂಪುಟ ಅನುಮೋದನೆ
ಬೆಂಗಳೂರು, 24 ಜುಲೈ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ವಿಷಯಗಳ ಕುರಿತು ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. ವೈದ್ಯಕೀಯ, ಕಾರಾಗೃಹ ಹಾಗೂ ಸಾರ್ವಜನಿಕ ಆರೋಗ್ಯ ಸಂಬಂಧಿ ಮೂರು ಪ್ರಮುಖ ವಿಷಯಗಳಲ್ಲಿ ನಿರ್ಣಯಗಳಾಗಿವ
ಮಹತ್ವದ ಯೋಜನೆಗಳಿಗೆ ಸಚಿವ ಸಂಪುಟ ಅನುಮೋದನೆ


ಬೆಂಗಳೂರು, 24 ಜುಲೈ (ಹಿ.ಸ.) :

ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ವಿಷಯಗಳ ಕುರಿತು ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. ವೈದ್ಯಕೀಯ, ಕಾರಾಗೃಹ ಹಾಗೂ ಸಾರ್ವಜನಿಕ ಆರೋಗ್ಯ ಸಂಬಂಧಿ ಮೂರು ಪ್ರಮುಖ ವಿಷಯಗಳಲ್ಲಿ ನಿರ್ಣಯಗಳಾಗಿವೆ.

ಅಂಬ್ಯುಲೆನ್ಸ್ ನಿರ್ವಹಣೆಗೆ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ

“ಕರ್ನಾಟಕ ರಾಜ್ಯ ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ) ವಿಧೇಯಕ, 2025”ಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಈ ತಿದ್ದುಪಡಿ ಮೂಲಕ ರಾಜ್ಯದಲ್ಲಿ ಅಂಬ್ಯುಲೆನ್ಸ್ ಸೇವೆಗಳ ನಿಯಂತ್ರಣ ಹಾಗೂ ಕಾರ್ಯಪದ್ಧತಿಯಲ್ಲಿ ಸುಧಾರಣೆಗೆ ನಿಟ್ಟು ಹಾಕಲಾಗಿದೆ.

ಔಷಧ ಖರೀದಿಗೆ ರೂ.880.68 ಕೋಟಿ ವೆಚ್ಚದ ಅನುಮೋದನೆ

2025-26ನೇ ಸಾಲಿನಲ್ಲಿ ಸಾರ್ವಜನಿಕ ಆರೋಗ್ಯ ಸಂಸ್ಥೆಗಳ ಅಗತ್ಯಗಳಿಗಾಗಿ 890 ಔಷಧಗಳು, ಉಪಭೋಗ್ಯ ವಸ್ತುಗಳು ಹಾಗೂ ರಾಸಾಯನಿಕಗಳನ್ನು ಕೆಟಿಪಿಪಿ ಕಾಯ್ದೆ 1999 ಮತ್ತು ನಿಯಮ 2000ರ ಅನುಸಾರ ಟೆಂಡರ್ ಮೂಲಕ ಖರೀದಿ ಮಾಡಲಾಗುವುದು. ಈ ಯೋಜನೆಗೆ ರೂ.880.68 ಕೋಟಿಗಳ ಅಂದಾಜು ವೆಚ್ಚವನ್ನು ಅನುಮೋದನೆ ಮಾಡಲಾಗಿದೆ. ಅಗತ್ಯವಿರುವ ಅನುದಾನವನ್ನು ಬಿಡುಗಡೆ ಮಾಡುವುದಕ್ಕೂ ಸಚಿವ ಸಂಪುಟ ಒಪ್ಪಿಗೆ ನೀಡಿದೆ.

46 ಜೀವಾವಧಿ ಶಿಕ್ಷಾ ಬಂದಿಗಳ ಅವಧಿಪೂರ್ವ ಬಿಡುಗಡೆಗೆ ತೀರ್ಮಾನ

ರಾಜ್ಯದ ವಿವಿಧ ಕಾರಾಗೃಹಗಳಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 46 ಬಂದಿಗಳನ್ನು ಸನ್ನಡತೆಯ ಆಧಾರದ ಮೇಲೆ ಅವಧಿಪೂರ್ವ ಬಿಡುಗಡೆ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ. ಜೊತೆಗೆ, ಇನ್ನೂ 3 ಶಿಕ್ಷಾ ಬಂಧಿಗಳ ಬಿಡುಗಡೆಗೆ ಕೇಂದ್ರ ಗೃಹ ಸಚಿವಾಲಯದ ಅನುಮತಿ ದೊರೆಯುವ ಹಿನ್ನೆಲೆಯಲ್ಲಿ, ಸಂವಿಧಾನದ ಅನುಚ್ಛೇದ 161ರ ಪ್ರಕಾರ ಅವಧಿಪೂರ್ವ ಬಿಡುಗಡೆಗೆ ಒಪ್ಪಿಗೆ ನೀಡಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande