ರಾಯಚೂರು, 24 ಜುಲೈ (ಹಿ.ಸ.) :
ಆ್ಯಂಕರ್ : ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ವತಿಯಿಂದ ವಿಶ್ವ ಹಿರಿಯ ನಾಗರೀಕರ ದಿನಾಚರಣೆ-2025ರ ಸಂಬಂಧ ಹಿರಿಯ ನಾಗರೀಕರ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿದ ವಯೋಶ್ರೇಷ್ಠ ರಾಜ್ಯ ಪ್ರಶಸ್ತಿಗೆ ಪ್ರಸ್ತಾವನೆಗಳನ್ನು ಸಲ್ಲಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹಿರಿಯ ನಾಗರೀಕರು ಶಿಕ್ಷಣ, ಸಾಹಿತ್ಯ, ಕಲೆ, ಕಾನೂನು, ಪ್ರತಿಭೆ ಹಾಗೂ ಕ್ರೀಡೆ ಹಾಗೂ ಹಿರಿಯ ನಾಗರೀಕರ ಕ್ಷೇತ್ರದಲ್ಲಿ ಸಮಾಜ ಸೇವೆಯನ್ನು ಒಳಗೊಂಡಂತೆ 6 ವೈಯಕ್ತಿಕ ರಾಜ್ಯ ಪ್ರಶಸ್ತಿಗಳನ್ನು ಮತ್ತು ಹಿರಿಯ ನಾಗರೀಕರ ಕ್ಷೇತ್ರದಲ್ಲಿ ಉತ್ತಮ ಕಾರ್ಯನಿರ್ವಹಿಸುತ್ತಿರುವ 1 ಸಂಸ್ಥೆಗೆ ರಾಜ್ಯ ಪ್ರಶಸ್ತಿ ಸೇರಿದಂತೆ ಒಟ್ಟು 07 ಪ್ರಶಸ್ತಿಗಳನ್ನು ನೀಡಲು ಪ್ರಸ್ತಾವನೆಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ನಮೂನೆ ಪಡೆಯಲು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ಮಾವಿನ ಕೆರೆ ಆಜಾದ ನಗರ, ರಾಯಚೂರು ದೂರವಾಣಿ ಸಂಖ್ಯೆ: 08532-200992ಗೆ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ. ಅರ್ಜಿ ಆಗಸ್ಟ್ 25ರೊಳಗಾಗಿ ಸಲ್ಲಿಸಬಹುದಾಗಿದೆ. ತಡವಾಗಿ ಬಂದಂತಹ ಪ್ರಸ್ತಾವನೆಗಳ ಪರಿಗಣಿಸುವುದಿಲ್ಲ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್