ಕೊಪ್ಪಳ, 24 ಜುಲೈ (ಹಿ.ಸ.) :
ಆ್ಯಂಕರ್ : ಮಹಾಂತ ಶಿವಯೋಗಿ ಸ್ವಾಮೀಜಿ ಅವರ ಜನ್ಮ ದಿನಾಚರಣೆ ಅಂಗವಾಗಿ ಪ್ರತಿ ವರ್ಷ ಆಗಸ್ಟ್ 1 ರಂದು ಆಚರಿಸುವ ವ್ಯಸನ ಮುಕ್ತ ದಿನಾಚರಣೆಯನ್ನು ಜಿಲ್ಲಾ ಕೇಂದ್ರದಲ್ಲಿ ಮತ್ತು ಜಿಲ್ಲೆಯ ಎಲ್ಲಾ ತಾಲ್ಲೂಕಿನಲ್ಲಿ ತಹಶಿಲ್ದಾರರ ನೇತೃತ್ವದಲ್ಲಿ ಈ ಕಾರ್ಯಕ್ರಮ ಅಚ್ಚುಕಟ್ಟಾಗಿ ಆಚರಣೆ ಮಾಡಬೇಕೆಂದು ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ ಅವರು ಹೇಳಿದ್ದಾರೆ.
ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಆಗಸ್ಟ್ 1 ರಂದು ಡಾ. ಮಹಾಂತ ಶಿವಯೋಗಿ ಜನ್ಮ ದಿನಾಚರಣೆ ಅಂಗವಾಗಿ ಆಚರಿಸುವ ವ್ಯಸನಮುಕ್ತ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.
ಮಹಾಂತ ಶಿವಯೋಗಿಗಳು ಜನರ ದುಶ್ಚಟಗಳನ್ನು ಬಿಡಿಸಲು ಅವರು ಜೋಳಿಗಿ ಹಿಡಿದು ಅದರಲ್ಲಿ ಎಲ್ಲಾ ಕೆಟ್ಟ ಚಟಗಳನ್ನು ಹಾಕಿ ಎಂದು ಜನರಿಗೆ ಹೇಳುವ ಮೂಲಕ ಅವರನ್ನು ದುಶ್ಚಟಗಳಿಂದ ಮುಕ್ತರನ್ನಾಗಿ ಮಾಡಿ, ವ್ಯಸನ ಮುಕ್ತ ಆಂದೋಲನದ ಹರಿಕಾರರಾದರು. ಇಂತಹ ಮಹನೀಯರ ಜಯಂತಿ ಕಾರ್ಯಕ್ರಮ ಎಲ್ಲರೂ ಸೇರಿ ಆಚರಿಸುವ ಮೂಲಕ ಸಮಾಜಕ್ಕೆ ಒಂದು ಒಳ್ಳೆಯ ಸಂದೇಶ ಹೋಗಬೇಕಿದೆ ಎಂದರು.
ಕಾಲೇಜುಗಳ ಮಕ್ಕಳು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೇರುವಂತೆ ನೋಡಿಕೊಳ್ಳಬೇಕು. ಮಹಾಂತ ಶಿವಯೋಗಿಗಳ ಕುರಿತು ಮಾತನಾಡುವ ಒಳ್ಳೆಯ ಉಪನ್ಯಾಸಕರನ್ನು ಕರೆಸಿ ಅವರ ವಿಚಾರಗಳನ್ನು ಯುವ ಪೀಳಿಗೆಗೆ ತಿಳಿಸುವ ಕೆಲಸ ಮಾಡಬೇಕು. ಮಧ್ಯಪಾನದಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಜನರಿಗೆ ತಿಳಿ ಹೇಳುವುದು ಇಂದಿನ ದಿನಮಾನಗಳಲ್ಲಿ ಬಹಳ ಅವಶ್ಯಕತೆ ಇದೆ ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಂಶುಪಾಲರಾದ ಕೃಷ್ಣಮೂರ್ತಿ ದೇಸಾಯಿ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೆಶಕ ಜಗದೀಶ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೆಶಕ ಶ್ರೀಶೈಲ್ ಬಿರಾದಾರ, ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಸುರೇಶ ಜಿ. ಸೇರಿದಂತೆ ಇತರರು ಉಪಸ್ಥಿತರಿದ್ದರು
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್