ಜುಲೈ 27ಕ್ಕೆ ಬಂಗಾರಮ್ಮ ಸಜ್ಜನ ಸ್ಮರಣೆ ಕಾರ್ಯಕ್ರಮ
ವಿಜಯಪುರ, 24 ಜುಲೈ (ಹಿ.ಸ.) : ಆ್ಯಂಕರ್ : ವಿಜಯಪುರ ಬಿ.ಎಲ್.ಡಿ.ಇ ಸಂಸ್ಥೆ ಕಟ್ಟಿ ಬೆಳೆಸಿದ ಡಾ. ಫ.ಗು.ಹಳಕಟ್ಟಿ, ಬಂಥನಾಳ ಸಂಗನಬಸವ ಶಿವಯೋಗಿಗಳು, ಬಿ.ಎಂ.ಪಾಟೀಲ ಹಾಗೂ ಬಂಗಾರಮ್ಮ ಸಜ್ಜನ ಅವರ ಸ್ಮರಣೆ ಕಾರ್ಯಕ್ರಮ ದಿ.27 ರವಿವಾರ ಬೆ. 10.30 ಗಂ. ಬಿ.ಎಂ.ಪಾಟೀಲ ವೈದ್ಯಕೀಯ ಕಾಲೇಜು, ಗ್ರಂಥಾಲಯ ಸಭಾಂಗಣದಲ
ಜುಲೈ 27ಕ್ಕೆ ಬಂಗಾರಮ್ಮ ಸಜ್ಜನ ಸ್ಮರಣೆ ಕಾರ್ಯಕ್ರಮ


ವಿಜಯಪುರ, 24 ಜುಲೈ (ಹಿ.ಸ.) :

ಆ್ಯಂಕರ್ : ವಿಜಯಪುರ ಬಿ.ಎಲ್.ಡಿ.ಇ ಸಂಸ್ಥೆ ಕಟ್ಟಿ ಬೆಳೆಸಿದ ಡಾ. ಫ.ಗು.ಹಳಕಟ್ಟಿ, ಬಂಥನಾಳ ಸಂಗನಬಸವ ಶಿವಯೋಗಿಗಳು, ಬಿ.ಎಂ.ಪಾಟೀಲ ಹಾಗೂ ಬಂಗಾರಮ್ಮ ಸಜ್ಜನ ಅವರ ಸ್ಮರಣೆ ಕಾರ್ಯಕ್ರಮ ದಿ.27 ರವಿವಾರ ಬೆ. 10.30 ಗಂ. ಬಿ.ಎಂ.ಪಾಟೀಲ ವೈದ್ಯಕೀಯ ಕಾಲೇಜು, ಗ್ರಂಥಾಲಯ ಸಭಾಂಗಣದಲ್ಲಿ ವಚನ ಪಿತಾಮಹ ಡಾ.ಫ.ಗು.ಹಳಕಟ್ಟಿ ಸಂಶೋಧನ ಕೇಂದ್ರದ ಚಿಂತನ-ಸಾಂಸ್ಕೃತಿಕ ಬಳಗದ ವತಿಯಿಂದ ಆಯೋಜಿಸಲಾಗಿದೆ.

ಬೆಂಗಳೂರಿನ ಬೇಲಿಮಠ ಮಹಾಸಂಸ್ಥಾನ ಮಠದ ಪರಮಪೂಜ್ಯ ನಿ.ಪ್ರ ಶಿವಾನುಭವ ಚರಮೂರ್ತಿ ಶಿವರುದ್ರ ಮಹಾಸ್ವಾಮಿಗಳು ಸಾನಿಧ್ಯ ವಹಿಸಲಿದ್ದಾರೆ.

ಮುಖ್ಯಅತಿಥಿಗಳಾಗಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧ್ಯಕ್ಷ, ರಾಜ್ಯ ಸಭೆಯ ಪ್ರತಿ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಆಗಮಿಸಲಿದ್ದಾರೆ. ಬಿ.ಎಲ್.ಡಿ.ಇ ಅಧ್ಯಕ್ಷ, ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಚಿಂತನ ಬಳಗ ಕಾರ್ಯದರ್ಶಿ ಡಾ.ಮಹಾಂತೇಶ ಬಿರಾದಾರ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande