ಜುಲೈ 26 ರಂದು ಗ್ರೂಪ್ ಬಿ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆ
ಕೊಪ್ಪಳ, 24 ಜುಲೈ (ಹಿ.ಸ.) : ಆ್ಯಂಕರ್ : ರಾಜ್ಯದ ಇಲಾಖೆಗಳಲ್ಲಿನ ಗ್ರೂಪ್ ಬಿ ವೃಂದದ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳು ಜುಲೈ 26 ರಂದು ಮಧ್ಯಾಹ್ನ 2 ರಿಂದ ಸಂಜೆ 4 ಗಂಟೆಯವರೆಗೆ ಕೊಪ್ಪಳ ಜಿಲ್ಲೆಯ 3 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಗಳು ಸುಗಮ ಹಾಗೂ ಶಾಂತಿಯುತವಾಗಿ ನಡೆಯುವ ಉದ್ದ
ಜುಲೈ 26 ರಂದು ಗ್ರೂಪ್ ಬಿ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆ


ಕೊಪ್ಪಳ, 24 ಜುಲೈ (ಹಿ.ಸ.) :

ಆ್ಯಂಕರ್ : ರಾಜ್ಯದ ಇಲಾಖೆಗಳಲ್ಲಿನ ಗ್ರೂಪ್ ಬಿ ವೃಂದದ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳು ಜುಲೈ 26 ರಂದು ಮಧ್ಯಾಹ್ನ 2 ರಿಂದ ಸಂಜೆ 4 ಗಂಟೆಯವರೆಗೆ ಕೊಪ್ಪಳ ಜಿಲ್ಲೆಯ 3 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಗಳು ಸುಗಮ ಹಾಗೂ ಶಾಂತಿಯುತವಾಗಿ ನಡೆಯುವ ಉದ್ದೇಶದಿಂದ ಪರೀಕ್ಷಾ ಕೇಂದ್ರದ ಸುತ್ತಲಿನ 200ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಸುರೇಶ ಬಿ ಇಟ್ನಾಳ ಅವರು ಆದೇಶ ಹೊರಡಿಸಿದ್ದಾರೆ.

ಪರೀಕ್ಷಾ ಕೇಂದ್ರಗಳ ವಿವರ: ಕೊಪ್ಪಳ ನಗರದ ಸಾರ್ವಜನಿಕ ಮೈದಾನದ ಹತ್ತಿರದ ಸರ್ಕಾರಿ ಬಾಲಕಿಯರ ಪಿ.ಯು ಕಾಲೇಜು, ಕೊಪ್ಪಳದ ಅಶೋಕ್ ವೃತ್ತದ ಬಳಿಯ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ಜವಾಹರ ರಸ್ತೆ ಹತ್ತಿರದ ಸರ್ಕಾರಿ ಬಾಲಕರ ಪಿ.ಯು ಕಾಲೇಜು ಸೇರಿ ಈ 3 ಪರೀಕ್ಷಾ ಕೇಂದ್ರಗಳಲ್ಲಿ ವಿವಿಧ ಇಲಾಖೆಗಳ ಗ್ರೂಪ್ ಬಿ ವೃಂದದ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳು ಜುಲೈ 26 ರಂದು ಮಧ್ಯಾಹ್ನ 2 ರಿಂದ ಸಂಜೆ 4 ಗಂಟೆಯವರೆಗೆ ನಡೆಯಲಿವೆ.

ಪರೀಕ್ಷಾ ಕೇಂದ್ರದಲ್ಲಿ ಯಾವುದೇ ರೀತಿಯ ಅಕ್ರಮ, ಅವ್ಯವಹಾರ ನಡೆಯದಂತೆ ತಡೆಗಟ್ಟಲು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ 163ರ ಅನ್ವಯ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ಅಂತರದ ಪ್ರದೇಶದಲ್ಲಿ ವಿವಿಧ ಷರತ್ತಿಗೆ ಒಳಪಟ್ಟು ನಿಷೇದಾಜ್ಞೆ ಜಾರಿಗೊಳಿಸಲಾಗಿದೆ. ನಿಷೇಧಿತ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ., ಮೊಬೈಲ್ ಪೇಜರ್, ಝರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿದೆ. ಪರೀಕ್ಷೆಯಲ್ಲಿ ಪ್ರವೇಶ ಪತ್ರ ಹೊಂದಿದ ಅಭ್ಯರ್ಥಿಗಳು ಹಾಗೂ ನಿಯೋಜಿತ ಶಿಕ್ಷಕರನ್ನು, ಜಾಗೃತ ದಳದವರನ್ನು ಹೊರತುಪಡಿಸಿ ಇನ್ನೂಳಿದವರಿಗೆ ಪರವಾನಿಗೆ ಇಲ್ಲದೇ ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಮಾಡುವುದನ್ನು ನಿಷೇಧಿಸಲಾಗಿದೆ.

ನಕಲು ಮಾಡುವ ಸಾಮಗ್ರಿಗಳನ್ನು ಹಾಗೂ ಹೊರಗಿನಿಂದ ಕಾಪಿ ಬರೆದು ಪರೀಕ್ಷಾ ಕೇಂದ್ರಗಳಲ್ಲಿ ಪೂರೈಸುವುದನ್ನು ನಿಬರ್ಂಧಿಸಲಾಗಿದೆ. 200 ಮೀಟರ್ ಪರೀಕ್ಷಾ ಕೇಂದ್ರಗಳ ಸುತ್ತಲೂ ಜನರು ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವದನ್ನು ನಿಷೇಧಿಸಿದೆ. ಈ ಆದೇಶವು ಮದುವೆ, ಶವ ಸಂಸ್ಕಾರಗಳು ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯವಾಗುವದಿಲ್ಲ ಎಂದು ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande