ಮಂಡಿ, 24 ಜುಲೈ (ಹಿ.ಸ.) :
ಆ್ಯಂಕರ್ : ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯ ಸರ್ಕಾಘಾಟ್ ಉಪವಿಭಾಗದ ಮಾಸೆರಾನ್ ಬಳಿಯ ತರಂಗಲಾ ತಿರುವಿನಲ್ಲಿ, ಹಿಮಾಚಲ ರಸ್ತೆ ಸಾರಿಗೆ ನಿಗಮದ ಕಂದಕಕ್ಕೆ ಉರುಳಿ ಬಿದ್ದಿದೆ. ಅಪಘಾತದಲ್ಲಿ 5 ಜನರು ಸಾವಿಗೀಡಾಗಿದ್ದು, 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಅವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ.
ಸ್ಥಳೀಯರು ಕೂಡಲೇ ರಕ್ಷಣಾ ಕಾರ್ಯಕ್ಕೆ ಧಾವಿಸಿದರು ಮತ್ತು ಡಿಎಸ್‌ಪಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ್ದದ್ದು ಎಂಬ ಪ್ರಾಥಮಿಕ ತನಿಖೆ ವೇಳೆ ತಿಳಿದು ಬಂದಿದೆ.
ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಘಟನೆಗೆ ದುಃಖ ವ್ಯಕ್ತಪಡಿಸಿ ಗಾಯಾಳುಗಳಿಗೆ ಶೀಘ್ರ ಚಿಕಿತ್ಸೆ ನೀಡಲು ಸೂಚನೆ ನೀಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa