ನಾಳೆ ಬಳ್ಳಾರಿಗೆ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಕಾರ್ಯದರ್ಶಿ
ಬಳ್ಳಾರಿ, 24 ಜುಲೈ (ಹಿ.ಸ.) : ಆ್ಯಂಕರ್ : ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಕಾರ್ಯದರ್ಶಿಗಳು ನಾಳೆ ಬಳ್ಳಾರಿಗೆ ಆಗಮಿಸಿ, ಬೆಳಿಗ್ಗೆ 9 ಗಂಟೆಗೆ ಬಳ್ಳಾರಿ ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಮಹಾನಗರ ಪಾಲಿಕೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಚ್ಛತಾ ಸಿಬ್ಬಂದಿ, ಕಾರ್ಮಿಕರು, ಪೌರಕಾರ್ಮಿಕ
ನಾಳೆ ಬಳ್ಳಾರಿಗೆ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಕಾರ್ಯದರ್ಶಿ


ಬಳ್ಳಾರಿ, 24 ಜುಲೈ (ಹಿ.ಸ.) :

ಆ್ಯಂಕರ್ : ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಕಾರ್ಯದರ್ಶಿಗಳು ನಾಳೆ ಬಳ್ಳಾರಿಗೆ ಆಗಮಿಸಿ, ಬೆಳಿಗ್ಗೆ 9 ಗಂಟೆಗೆ ಬಳ್ಳಾರಿ ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಮಹಾನಗರ ಪಾಲಿಕೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಚ್ಛತಾ ಸಿಬ್ಬಂದಿ, ಕಾರ್ಮಿಕರು, ಪೌರಕಾರ್ಮಿಕರು ಮತ್ತು ಗುರುತಿಸಿದ ಮ್ಯಾನ್ಯುವಲ್ ಸ್ಕ್ಯಾವೆಂಜರ್ ಮತ್ತು ಮೃತಪಟ್ಟ ಮ್ಯಾನ್ಯುವಲ್ ಸ್ಕ್ಯಾವೆಂಜರ್ ಅವಲಂಬಿತರೊಂದಿಗೆ ನೇರ ಸಂವಾದ ನಡೆಸುವರು.

ಬಳಿಕ ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸ್ಥಳೀಯ ಸಂಸ್ಥೆ ಹಾಗೂ ಗ್ರಾಮ ಪಂಚಾಯತ್‍ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರೊಂದಿಗೆ ನೇರ ಸಂವಾದ ಮತ್ತು ಕುಂದುಕೊರತೆಗಳ ಬಗ್ಗೆ ಪರಿಶೀಲನೆ ಸಭೆ ನಡೆಸುವರು.

ಸಂಬಂಧಿಸಿದ ಫಲಾನುಭವಿಗಳು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಕುಂದುಕೊರತೆಗಳ ಸಭೆಯಲ್ಲಿ ಭಾಗವಹಿಸಿ ತಮ್ಮ ಕುಂದು-ಕೊರತೆಗಳ ಅಹವಾಲು ಸಲ್ಲಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande