ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ಮಾಸಿಕ ಶಿಷ್ಯವೇತನ
ಕೊಪ್ಪಳ, 24 ಜುಲೈ (ಹಿ.ಸ.) : ಆ್ಯಂಕರ್ : ಸಮಾಜ ಕಲ್ಯಾಣ ಇಲಾಖೆಯ 2025 26ನೇ ಸಾಲಿನಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ತರಬೇತಿ ನೀಡಲು ಆನ್‍ಲೈನ್ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಪರಿಶಿಷ್ಟ ಪಂಗಡದ ಕಾನೂನು ಪದವೀಧ
ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ಮಾಸಿಕ ಶಿಷ್ಯವೇತನ


ಕೊಪ್ಪಳ, 24 ಜುಲೈ (ಹಿ.ಸ.) :

ಆ್ಯಂಕರ್ : ಸಮಾಜ ಕಲ್ಯಾಣ ಇಲಾಖೆಯ 2025 26ನೇ ಸಾಲಿನಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ತರಬೇತಿ ನೀಡಲು ಆನ್‍ಲೈನ್ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಪರಿಶಿಷ್ಟ ಪಂಗಡದ ಕಾನೂನು ಪದವೀಧರ ಅಭ್ಯರ್ಥಿಗಳು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವೆಬ್‍ಸೈಟ್ https://twd.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ ನಂತರ ಆನ್‍ಲೈನ್ ಅರ್ಜಿ ಪ್ರತಿಯೊಂದಿಗೆ ಸೂಕ್ತ ದಾಖಲಾತಿಗಳನ್ನು ತಮ್ಮ ತಾಲೂಕಿನ ಕೊಪ್ಪಳ, ಯಲಬುರ್ಗಾ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಅಥವಾ ಕುಷ್ಟಗಿ, ಗಂಗಾವತಿ ತಾಲೂಕ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಕಛೇರಿಗೆ ಕಡ್ಡಾಯವಾಗಿ ಸಲ್ಲಿಸಲು ಕೊಪ್ಪಳ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande