ರಾಯಚೂರು, 24 ಜುಲೈ (ಹಿ.ಸ.) :
ಆ್ಯಂಕರ್ : ಪಿಎಂಎಫ್‍ಎಂಇ ಯೋಜನೆಯಡಿ ಜಿಲ್ಲಾ ಉಸ್ತುವಾರಿ ಸಚಿವರ ಮುಂದಾಳತ್ವದಲ್ಲಿ ಅರಿವು ಮೂಡಿಸುವ ಕಾರ್ಯಕ್ರಮವನ್ನು ಜುಲೈ 30ರ ಬೆಳಿಗ್ಗೆ 10ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದು, ಎಲ್ಲಾ ಪಾಲುದಾರರು ಭಾಗವಹಿಸಿ ಯಶಸ್ವಿಗೊಳಿಸುವಂತೆ ಕೋರಲಾಗಿದೆ.
ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮಗಳ ನಿಯಮಬದ್ದಗೊಳಿಸುವಿಕ (ಪಿಎಂಎಫ್‍ಎಂಇ) ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಒಂದು ಮಹತ್ವಾಕಾಂಕ್ಷೆ ಯೋಜನೆಯಾಗಿದ್ದು, ರಾಜ್ಯದಲ್ಲಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಯ ಅಭಿವೃದ್ಧಿಗೆ ಸುವರ್ಣಾವಕಾಶ ಕಲ್ಪಿಸುತ್ತದೆ. ಈವರೆಗೂ ಯೋಜನೆಯಡಿಯಲ್ಲಿ ರಾಜ್ಯದಲ್ಲಿ 6500 ಕ್ಕೂ ಹೆಚ್ಚು ಉದ್ದಿಮೆದಾರರಿಗೆ ಮಂಜೂರಾತಿಯಾಗಿದ್ದು, ಮುಖ್ಯಮಂತ್ರಿಗಳು ತಮ್ಮ 2025-26ನೇ ಸಾಲಿನ ಆಯವ್ಯಯ ಭಾಷಣದಲ್ಲಿ 5000 ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳನ್ನು ಸ್ಥಾಪಿಸುವ ಘೋಷಣೆ ಮಾಡಿ ಈ ಉದ್ದೇಶಕ್ಕಾಗಿ 206.00 ಕೋಟಿ ರೂ. ಅನುದಾನ ಒದಗಿಸಿದ್ದಾರೆ. ಪ್ರಸ್ತುತ ಹಣಕಾಸಿನ ವರ್ಷವು ಯೋಜನೆಯ ಅನುμÁ್ಠನದ ಕೊನೆಯ ವರ್ಷವಾಗಿರುತ್ತದೆ.
ಈ ಯೋಜನೆಯ ಪ್ರಯೋಜನವನ್ನು ಪ್ರತಿ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಫಲಾನುಭವಿಗಳು ಪಡೆದುಕೊಳ್ಳುವ ಸಲುವಾಗಿ ಜಿಲ್ಲಾ ಉಸ್ತುವಾರಿ ಸಚಿವರ ಮುಂದಾಳತ್ವದಲ್ಲಿ ಪಿಎಂಎಫ್‍ಎಂಇ ಯೋಜನೆಯ ಬಗ್ಗೆ ವಿವಿಧ ಪಾಲುದಾರರಿಗೆ ಅರ್ಧ ದಿನದ ಅರಿವು ಮೂಡಿಸುವ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಕನಿಷ್ಟ 200 ಜನರಿಗೆ ಆಯೋಜಿಸಲಾಗುತ್ತಿದೆ.
ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ವಿಧಾನಸಭೆ ಮತ್ತು ವಿಧಾನ ಪರಿಷತ್ತಿನ ಸದಸ್ಯರು ಸೇರಿದಂತೆ ಇತರೆ ಚುನಾಯಿತ ಪ್ರತಿನಿಧಿಗಳು, ಕೃಷಿ ಸಂಬಂಧಿತ ಇಲಾಖೆಗಳಾದ ತೋಟಗಾರಿಕೆ, ಪಶುಸಂಗೋಪನೆ, ಮೀನುಗಾರಿಕ, ರೇμÉ್ಮ ಕೃಷಿ, ಕೈಗಾರಿಕೆ, ಕಂದಾಯ ಇತ್ಯಾದಿ ಇಲಾಖಾ ಅಧಿಕಾರಿಗಳು, ಲೀಡ್ ಬ್ಯಾಂಕ್ ಜಿಲ್ಲಾ ವ್ಯವಸ್ಥಾಪಕರು, ಜಿಲ್ಲೆಯ ಇತರೆ ಪ್ರಮುಖ ಬ್ಯಾಂಕುಗಳ ಪ್ರತಿನಿಧಿಗಳು, ರೈತ ಉತ್ಪಾದಕ ಸಂಸ್ಥೆಗಳು, ರೈತ ಪರ ಸಂಘಟನೆಗಳು, ಪ್ರಗತಿಪರ ರೈತರು, ಆಹಾರ ಸಂಸ್ಕರಣಾ ಉದ್ದಿಮೆದಾರರು ಹಾಗೂ ನವೋದ್ಯಮಿಗಳು, ಎನ್‍ಆರ್‍ಎಲ್‍ಎಮ್ ಹಾಗೂ ಎನ್‍ಯೂಎಲ್‍ಎಮ್ ಅಡಿಯಲ್ಲಿ ಬೀಜ ಬಂಡವಾಳ ಪಡೆದು ಆಹಾರ ಸಂಸ್ಕರಣೆಯಲ್ಲಿ ತೊಡಗಿರುವ ಸ್ವಸಹಾಯಕ ಸಂಘದ ಸದಸ್ಯರು, ಜಿಲ್ಲೆಯ ವಿವಿಧ ಇಲಾಖೆಗಳಲ್ಲಿ ಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್