ರಾಜ್ಯದಲ್ಲಿ ಬಾರಿ ಮಳೆ ಮುನ್ಸೂಚನೆ
ಬೆಂಗಳೂರು, 24 ಜುಲೈ (ಹಿ.ಸ.) : ಆ್ಯಂಕರ್ : ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ ಎರಡು ದಿನಗಳವರೆಗೆ ಭಾರಿ ಮಳೆ ಸುರಿಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ, ಹವಾಮಾನ ಇಲಾಖೆ ಕೆಂಪು ಎಚ್ಚರಿಕೆ ಘೋಷಿಸಿದೆ. ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿಗೆ ಈ ಎಚ್ಚರಿಕೆ ಜಾರಿಯಲ್ಲಿದೆ. ಸುರಕ್ಷ
Rain alert


ಬೆಂಗಳೂರು, 24 ಜುಲೈ (ಹಿ.ಸ.) :

ಆ್ಯಂಕರ್ : ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ ಎರಡು ದಿನಗಳವರೆಗೆ ಭಾರಿ ಮಳೆ ಸುರಿಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ, ಹವಾಮಾನ ಇಲಾಖೆ ಕೆಂಪು ಎಚ್ಚರಿಕೆ ಘೋಷಿಸಿದೆ. ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿಗೆ ಈ ಎಚ್ಚರಿಕೆ ಜಾರಿಯಲ್ಲಿದೆ. ಸುರಕ್ಷತೆಯ ದೃಷ್ಟಿಯಿಂದ ಈ ಮೂರು ಜಿಲ್ಲೆಗಳ ಶಾಲಾ ಮತ್ತು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಅದೇ ರೀತಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಕಿತ್ತಳೆ ಎಚ್ಚರಿಕೆ, ಹಾಗೂ ಮೈಸೂರು, ದಾವಣಗೆರೆ, ಯಾದಗಿರಿ, ವಿಜಯನಗರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ ಜಿಲ್ಲೆಗಳಿಗೆ ಹಳದಿ ಎಚ್ಚರಿಕೆ ಘೋಷಿಸಲಾಗಿದೆ.

ಮೀನುಗಾರಿಕೆಗೆ ಕಟ್ಟುನಿಟ್ಟಿನ ನಿಷೇಧ:

ಅರಬ್ಬಿ ಸಮುದ್ರದಲ್ಲಿ ಭಾರಿ ಗಾಳಿ ಹಾಗೂ ಅಲೆಗಳು ಬೀಸುತ್ತಿರುವುದರಿಂದ ಸಮುದ್ರ ಪ್ರಕ್ಷುಬ್ಧವಾಗಿದೆ. ಹವಾಮಾನ ಇಲಾಖೆಯ ಸೂಚನೆಯಂತೆ, ಮಂಗಳೂರು ಜಂಟಿ ಮೀನುಗಾರಿಕಾ ನಿರ್ದೇಶಕರು ಪ್ರಕಟಣೆ ಹೊರಡಿಸಿ, ನಾಡದೋಣಿ ಮೀನುಗಾರರು ಸೇರಿದಂತೆ ಯಾರೂ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಬಾರದು ಎಂದು ಕಟ್ಟುನಿಟ್ಟಾಗಿ ಸೂಚನೆ ನೀಡಿದ್ದಾರೆ.

ಜಾಗೃತೆಯಿಂದಿರಲಿ ಸಾರ್ವಜನಿಕರು:

ಪ್ರವಾಹ, ಭೂಕುಸಿತ ಉಂಟಾಗುವ ಪ್ರದೇಶಗಳನ್ನು ಸ್ಥಳೀಯ ಆಡಳಿತ ಗುರುತಿಸಿದ್ದು, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ನದಿ, ಕೆರೆ, ತಗ್ಗು ಪ್ರದೇಶಗಳು ಹಾಗೂ ಸಮುದ್ರ ತೀರದ ಕಡೆಗೆ ಸಾರ್ವಜನಿಕರು ಹಾಗೂ ಪ್ರವಾಸಿಗರು ಹೋಗಬಾರದು. ವಿದ್ಯುತ್ ಕಂಬಗಳು, ತಂತಿಗಳ ಸಮೀಪ ತೆರಳದಂತೆ ಸೂಚಿಸಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande