ಸಂಡೂರು : ಜುಲೈ 26 ರಂದು ವಿದ್ಯುತ್ ವ್ಯತ್ಯಯ
ಸಂಡೂರು, 24 ಜುಲೈ (ಹಿ.ಸ.) : ಆ್ಯಂಕರ್ : 33/11 ಕೆ.ವಿ ಸಂಡೂರು ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಕೆ ಒಳಪಡುವ 11 ಕೆ.ವಿ ಎಲ್‍ಟಿ ವಿದ್ಯುತ್ ಮಾರ್ಗಗಳ ಬದಲಾವಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜುಲೈ 26 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಸಂಡ
ಸಂಡೂರು : ಜುಲೈ 26 ರಂದು ವಿದ್ಯುತ್ ವ್ಯತ್ಯಯ


ಸಂಡೂರು, 24 ಜುಲೈ (ಹಿ.ಸ.) :

ಆ್ಯಂಕರ್ : 33/11 ಕೆ.ವಿ ಸಂಡೂರು ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಕೆ ಒಳಪಡುವ 11 ಕೆ.ವಿ ಎಲ್‍ಟಿ ವಿದ್ಯುತ್ ಮಾರ್ಗಗಳ ಬದಲಾವಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜುಲೈ 26 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಸಂಡೂರು ಪಟ್ಟಣ ಸೇರಿದಂತೆ ಕೃಷ್ಣನಗರ, ಸುಶೀಲಾನಗರ ಗ್ರಾಮ ಪಂಚಾಯಿತಿಗೆ ಒಳಪಡುವ ಗ್ರಾಮಗಳಲ್ಲಿ ಎನ್.ಜೆ.ವೈ ಮತ್ತು ಐಪಿಸೆಟ್ ಗ್ರಾಹಕರಿಗೆ ಹಾಗೂ ಯಶವಂತನಗರ ಮತ್ತು ದೇವಗಿರಿ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಒಳಪಡುವ ಗ್ರಾಮಗಳಲ್ಲಿ ಐಪಿಸೆಟ್ ಗ್ರಾಹಕರಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಜೆಸ್ಕಾಂ ಸಂಡೂರು ಕಾರ್ಯ ಮತ್ತು ಪಾಲನೆ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಕೆ.ಎ ಉಮೇಶ ಕುಮಾರ್ ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande