ಎಸ್‌ಐಆರ್ ವಿರುದ್ಧ ಸಂಸತ್ ಆವರಣದಲ್ಲಿ ಪ್ರತಿಭಟನೆ : ಸೋನಿಯಾ ಗಾಂಧಿ ಭಾಗಿ
ನವದೆಹಲಿ, 24 ಜುಲೈ (ಹಿ.ಸ.) : ಆ್ಯಂಕರ್ : ಬಿಹಾರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ವಿರುದ್ಧ ಇಂದು ಸಂಸತ್ ಭವನದ ಆವರಣದಲ್ಲಿ ಪ್ರತಿ ಪಕ್ಷಗಳ ಸಂಸದರು ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ಹಾಗೂ ಇಂಡಿಯಾ ಮೈತ್ರಿಕೂಟದ ಅನೇಕ ಸಂಸದರು ಭಾ
Protest


ನವದೆಹಲಿ, 24 ಜುಲೈ (ಹಿ.ಸ.) :

ಆ್ಯಂಕರ್ : ಬಿಹಾರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ವಿರುದ್ಧ ಇಂದು ಸಂಸತ್ ಭವನದ ಆವರಣದಲ್ಲಿ ಪ್ರತಿ ಪಕ್ಷಗಳ ಸಂಸದರು ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ಹಾಗೂ ಇಂಡಿಯಾ ಮೈತ್ರಿಕೂಟದ ಅನೇಕ ಸಂಸದರು ಭಾಗವಹಿಸಿದರು.

ಪ್ರತಿಭಟನೆಯ ವೇಳೆ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು, ಆಡಳಿತ ಪಕ್ಷ ಪ್ರಜಾಪ್ರಭುತ್ವದ ಸತ್ವವನ್ನೇ ನಾಶಮಾಡುತ್ತಿದೆ ಎಂದು ಆರೋಪಿಸಿದರು.

ರಾಜ್ಯ ಸಭಾ ಸಂಸದ ರಂಜಿತ್ ರಂಜನ್, ಚುನಾವಣಾ ಆಯೋಗವು ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ತಪ್ಪು ಮಾಹಿತಿ ನೀಡುತ್ತಿದೆ. ಶೇಕಡಾ 95 ರಷ್ಟು ಪರಿಶೀಲನೆ ಆಗಿದೆ ಎನ್ನುತ್ತದೆ, ಆದರೆ ಬಿಎಲ್‌ಒಗಳು ಜುಲೈ 26ರಿಂದ ಪ್ರಕ್ರಿಯೆ ಆರಂಭವಾಗುತ್ತದೆ ಎನ್ನುತ್ತಿದ್ದಾರೆ ಎಂದು ಆರೋಪಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande