ದರ್ಶನ್ ಜಾಮೀನು ಕುರಿತ ತೀರ್ಪು ಕಾಯ್ದಿರಿಸಿದ ಸರ್ವೋಚ್ಚ ನ್ಯಾಯಾಲಯ
ನವದೆಹಲಿ, 24 ಜುಲೈ (ಹಿ.ಸ.) : ಆ್ಯಂಕರ್ : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿದ್ದ ಚಿತ್ರನಟ ದರ್ಶನ್ ಸೇರಿದಂತೆ ಒಟ್ಟು 17 ಆರೋಪಿಗಳ ಪೈಕಿ ಎಂಟು ಮಂದಿಗೆ ಹೈಕೋರ್ಟ್ ಜಾಮೀನು ನೀಡಿದ್ದ ಹಿನ್ನೆಲೆಯಲ್ಲಿ, ಈ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸರ್ವೋಚ್ಚ ನ್ಯಾಯಾಲಯಕ್ಕೆ
Court


ನವದೆಹಲಿ, 24 ಜುಲೈ (ಹಿ.ಸ.) :

ಆ್ಯಂಕರ್ : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿದ್ದ ಚಿತ್ರನಟ ದರ್ಶನ್ ಸೇರಿದಂತೆ ಒಟ್ಟು 17 ಆರೋಪಿಗಳ ಪೈಕಿ ಎಂಟು ಮಂದಿಗೆ ಹೈಕೋರ್ಟ್ ಜಾಮೀನು ನೀಡಿದ್ದ ಹಿನ್ನೆಲೆಯಲ್ಲಿ, ಈ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸರ್ವೋಚ್ಚ ನ್ಯಾಯಾಲಯಕ್ಕೆ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಯಿತು.

ನ್ಯಾಯಮೂರ್ತಿ ಜೆ.ಬಿ. ಪಾರ್ದಿವಾಲಾ ಮತ್ತು ನ್ಯಾಯಮೂರ್ತಿ ಆರ್. ಮಹದೇವನ್ ಅವರಿದ್ದ ಪೀಠವು ವಾದ-ಪ್ರತಿವಾದ ಆಲಿಸಿ ತೀರ್ಪನ್ನು 10 ದಿನಗಳವರೆಗೆ ಕಾಯ್ದಿರಿಸಿದೆ.

ರಾಜ್ಯ ಸರ್ಕಾರದ ಪರವಾಗಿ ಹಿರಿಯ ವಕೀಲ ಸಿದ್ಧಾರ್ಥ್ ಲೂಥ್ರಾ ವಾದ ಮಂಡಿಸಿ, “ಇದು ಗಂಭೀರ ಮತ್ತು ಕ್ರೂರ ಕೊಲೆ ಪ್ರಕರಣ. ಆರೋಪಿಗಳಿಗೆ ಜಾಮೀನು ನೀಡಿದರೆ ಸಾಕ್ಷ್ಯ ನಾಶವಾಗುವ, ಸಾಕ್ಷಿದಾರರ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ” ಎಂದು ವಾದಿಸಿದರು.

ಅವರು ತಮ್ಮ ವಾದದಲ್ಲಿ, ದರ್ಶನ್ ಹಾಗೂ ಪವಿತ್ರಾ ನಡುವೆ ಇದ್ದ ಸಂಬಂಧ, ಹತ್ಯೆಗೆ ಸಂಬಂಧಿಸಿದ ಸಾಕ್ಷ್ಯಗಳು, ಜಾಮೀನು ನಂತರ ದರ್ಶನ್ ಸಾಕ್ಷಿದಾರರ ಸಂಪರ್ಕಕ್ಕೆ ಬಂದಿರುವ ಆರೋಪಗಳು ಸೇರಿದಂತೆ ಹಲವು ಅಂಶಗಳನ್ನು ಮಂಡಿಸಿದರು. ನ್ಯಾಯಾಲಯ ಕೂಡ ಹೈಕೋರ್ಟ್ ನೀಡಿದ ಜಾಮೀನು ಆದೇಶದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ.

ಇದಕ್ಕೂ ಮುನ್ನ, ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್ ಐಷಾರಾಮಿ ಬದುಕು ನಡೆಸುತ್ತಿದ್ದರು ಎಂಬ ಆರೋಪದ ಬೆನ್ನಲ್ಲೇ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗಿತ್ತು. ಜೈಲಿನಲ್ಲಿ ಬೆನ್ನು ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ದರ್ಶನ್ ಮಧ್ಯಂತರ ಜಾಮೀನು ಪಡೆದು, ನಂತರ ಹೈಕೋರ್ಟ್‌ನಿಂದ ಪೂರ್ಣ ಜಾಮೀನಿನ ಭಾಗ್ಯ ಪಡೆದಿದ್ದರು.

ಇದೀಗ, ಸುಪ್ರೀಂ ಕೋರ್ಟ್ ನೀಡಲಿರುವ ತೀರ್ಪು ಈ ಪ್ರಕರಣದ ಮುಂದಿನ ಹೆಜ್ಜೆಗೆ ತೀರ್ಮಾನಕಾರಿ ಆಗಲಿದೆ.

ಇದೇ ವೇಳೆ, ದರ್ಶನ್ ಅವರು ತಮ್ಮ ‘ಡೆವಿಲ್’ ಚಿತ್ರ ಶೂಟಿಂಗ್‌ಗಾಗಿ ಜುಲೈ 15ರಂದು ಥೈಲ್ಯಾಂಡ್‌ಗೆ ತೆರಳಿದ್ದು, ಜುಲೈ 25ರಂದು ಬೆಂಗಳೂರಿಗೆ ಹಿಂದಿರುಗುವ ನಿರೀಕ್ಷೆಯಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande