ಕಾನೂನು ಪದವಿ ಭತ್ಯೆಗೆ ಅರ್ಜಿ ಆಹ್ವಾನ
ರಾಯಚೂರು, 25 ಜುಲೈ (ಹಿ.ಸ.) : ಆ್ಯಂಕರ್ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2025-26ನೇ ಸಾಲಿನಲ್ಲಿ ಕಾನೂನು ಪದವಿ ಪಡೆದಿರುವ ಅಲ್ಪಸಂಖ್ಯಾತರ ಅಭ್ಯರ್ಥಿಗಳಿಗೆ ತರಬೇತಿ ಭತ್ಯೆ ನೀಡಲು ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಲ್ಪಸಂಖ್ಯಾತರ ಸಮುದಾಯಗಳ
ಕಾನೂನು ಪದವಿ ಭತ್ಯೆಗೆ ಅರ್ಜಿ ಆಹ್ವಾನ


ರಾಯಚೂರು, 25 ಜುಲೈ (ಹಿ.ಸ.) :

ಆ್ಯಂಕರ್ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2025-26ನೇ ಸಾಲಿನಲ್ಲಿ ಕಾನೂನು ಪದವಿ ಪಡೆದಿರುವ ಅಲ್ಪಸಂಖ್ಯಾತರ ಅಭ್ಯರ್ಥಿಗಳಿಗೆ ತರಬೇತಿ ಭತ್ಯೆ ನೀಡಲು ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅಲ್ಪಸಂಖ್ಯಾತರ ಸಮುದಾಯಗಳಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ ಮತ್ತು ಪಾರ್ಸಿ ಸಮುದಾಯಕ್ಕೆ ಸೇರಿದವರಾಗಿರಬೇಕು. ಅಭ್ಯರ್ಥಿಯ ಕುಟುಂಬದ ವಾರ್ಷಿಕ ಆದಾಯ 3.50 ಲಕ್ಷ ರೂ. ಮೀರಿರಬಾರದು. ಅಭ್ಯರ್ಥಿಯು ಬಾರ್ ಕೌನ್ಸಿಲಿಂಗ್‍ನಲ್ಲಿ ಹೆಸರನ್ನು ನೋಂದಾಯಿಸಿರಬೇಕು. ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಯ ವಯಸ್ಸು 30 ವರ್ಷದೊಳಗಿರಬೇಕು ಮತ್ತು ಅರ್ಜಿ ಸಲ್ಲಿಸಲುವ ಕೊನೆಯ ದಿನಾಂಕಕ್ಕೆ ಕಾನೂನು ಪದವಿ ಪೂರ್ಣಗೊಳಿಸಿ 2 ವರ್ಷವಾಗಿರಬೇಕು.

ಅಭ್ಯರ್ಥಿಗಳು ಸಲ್ಲಿಸುವ ಮಾಹೆಯಾನ ದಿನಚರಿಯನ್ನು ಪರಿಶೀಲಿಸಿ ತರಬೇತಿ ಭತ್ಯೆಯನ್ನು ಮಂಜೂರು ಮಾಡಲಾಗುವುದು. ಅಭ್ಯರ್ಥಿಯು ತರಬೇತಿಯನ್ನು ಮಧ್ಯೆದಲ್ಲಿ ಬಿಡುವಂತಿಲ್ಲ. ಈ ಬಗ್ಗೆ ಒಂದು ಮುಚ್ಚಳಿಕೆ ಪತ್ರ ನೀಡಬೇಕು. ಒಂದು ವೇಳೆ ಸರ್ಕಾರಿ ಉದ್ಯೋಗ ದೊರಕಿದಲ್ಲಿ ಅಥವಾ ನ್ಯಾಯಾಧೀಶರಾಗಿ ನೇಮಕಾತಿ ಹೊಂದಿದಲ್ಲಿ ಜಿಲ್ಲಾ ಸಮಿತಿಯ ಗಮನಕ್ಕೆ ತಂದು ತರಬೇತಿ ಬಿಡಬಹುದು ಹಾಗೂ ವಿಶೇಷ ಸಂದರ್ಭದಲ್ಲಿ ಬಿಡಬೇಕಾದಲ್ಲಿ ಸರ್ಕಾರದ ಅನುಮತಿ ಪಡೆಯಬೇಕು.

ದಾಖಲಾತಿಗಳ ವಿವರ: ನಿಗದಿತ ನಮೂನೆಯಲ್ಲಿ ಅರ್ಜಿ, ತಹಶೀಲ್ದಾರರಿಂದ ಪಡೆದ ಆದಾಯ ಮತ್ತು ಜಾತಿ ಪ್ರಮಾಣ ಪತ್ರ (ಧೃಡೀಕೃತ ಪ್ರತಿ), ತಹಶೀಲ್ದಾರರಿಂದ ಪಡೆದ ವಾಸಸ್ಥಳ ಪ್ರಮಾಣ ಪತ್ರ. ಸ್ವಯಂ ದೃಢೀಕೃತ 2 ಭಾವಚಿತ್ರ, ಕಾನೂನು ಪದವಿಯ ಅಂಕ ಪಟ್ಟಿ (ದೃಡೀಕೃತ ಪ್ರತಿ), ಬಾರ್ ಕೌನ್ಸಿಲಿಂಗ್‍ನಲ್ಲಿ ಹೆಸರನ್ನು ನೋಂದಾಯಿಸಿದ ಪ್ರತಿಯೊಂದಿಗೆ ಅಭ್ಯರ್ಥಿಗಳು ಗೂಗಲ್ ಪಾರಂ ವೆಬ್‍ಸೈಟ್ https://forms.gle/P52Q9gGV2hqS9hy6A ನಲ್ಲಿ ಆಗಸ್ಟ್ 08ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಜಿಲ್ಲೆಯಲ್ಲಿ ಮೂರು ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಇದರಲ್ಲಿ ಎರಡು ಅಭ್ಯರ್ಥಿ ಮುಸ್ಲಿಂ ಹಾಗೂ ಇನ್ನೊಬ್ಬ ಅಭ್ಯರ್ಥಿಯನ್ನು ಇತರೆ ಅಲ್ಪಸಂಖ್ಯಾತರ ಸಮುದಾಯದಿಂದ ಆಯ್ಕೆ ಮಾಡಲಾಗುವುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande