ಕೊಪ್ಪಳ, 25 ಜುಲೈ (ಹಿ.ಸ.) :
ಆ್ಯಂಕರ್ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಸಮಗ್ರ ಶಿಕ್ಷಣ ಕರ್ನಾಟಕ ಅಡಿಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ ವತಿಯಿಂದ ಸಮನ್ವಯ ಶಿಕ್ಷಣ ಚಟುವಟಿಕೆ ಅಡಿಯಲ್ಲಿ ತೀವ್ರ ನ್ಯೂನತೆ ಹೊಂದಿರುವ ಬಹುವಿಧ ನ್ಯೂನತೆ, ಸೆರೆಬ್ರಲ್ ಪಾಲಿ,್ಸ ಮಕ್ಕಳಿಗೆ ಫಿಜಿಯೋತೆರೆಪಿ ಚಿಕಿತ್ಸೆ ನೀಡಲು ಅರ್ಹ ಫಿಜಿಯೋತೆರೆಪಿಸ್ಟ್ ಅಭ್ಯರ್ಥಿಗಳನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ಬ್ಯಾಚುಲರ್‍ಆಫ್ ಫಿಜಿಯೋತೆರೆಪಿ (ಬಿ.ಪಿಟಿ) ಅಥವಾ ಡಿಪ್ಲೋಮಾ ಇನ್ ಫಿಜಿಯೋ ತೆರೆಪಿ (ಡಿ.ಪಿಟಿ) ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ಗೌರವಧನ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲಾಗುವದು. ನಿಗದಿತ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಜುಲೈ 29ರ ಒಳಗಾಗಿ ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ, ಶಾಸಕರ ಮಾದರಿಯ ಹಿರಿಯ ಪ್ರಾಥಮಿಕ ಶಾಲಾ ಆವರಣ ಸ್ಟೇಷನ್ ರಸ್ತೆ ಕೊಪ್ಪಳ ಇಲ್ಲಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ಕೊಪ್ಪಳ ಶಾಲಾ ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್