ಪೌರಕಾರ್ಮಿಕರು ತಪ್ಪದೇ ಸುರಕ್ಷಾ ಪರಿಕರ ಧರಿಸಿ : ಚಂದ್ರಕಲಾ
ಬಳ್ಳಾರಿ, 25 ಜುಲೈ (ಹಿ.ಸ.) : ಆ್ಯಂಕರ್ : ಜಿಲ್ಲಾ ವ್ಯಾಪ್ತಿಯ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಚ್ಛತಾ ಸಿಬ್ಬಂದಿ, ಕಾರ್ಮಿಕರು, ಸುರಕ್ಷಾ ಪರಿಕರಗಳನ್ನು ಧರಿಸಿ ಕಾರ್ಯನಿರ್ವಹಿಸಿ ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಕಾರ
ಪೌರಕಾರ್ಮಿಕರು ತಪ್ಪದೇ ಸುರಕ್ಷಾ ಪರಿಕರ ಧರಿಸಿ : ಚಂದ್ರಕಲಾ


ಪೌರಕಾರ್ಮಿಕರು ತಪ್ಪದೇ ಸುರಕ್ಷಾ ಪರಿಕರ ಧರಿಸಿ : ಚಂದ್ರಕಲಾ


ಬಳ್ಳಾರಿ, 25 ಜುಲೈ (ಹಿ.ಸ.) :

ಆ್ಯಂಕರ್ : ಜಿಲ್ಲಾ ವ್ಯಾಪ್ತಿಯ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಚ್ಛತಾ ಸಿಬ್ಬಂದಿ, ಕಾರ್ಮಿಕರು, ಸುರಕ್ಷಾ ಪರಿಕರಗಳನ್ನು ಧರಿಸಿ ಕಾರ್ಯನಿರ್ವಹಿಸಿ ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಕಾರ್ಯದರ್ಶಿ ಚಂದ್ರಕಲಾ ಅವರು ಹೇಳಿದ್ದಾರೆ.

ನಗರದ ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಮಹಾನಗರ ಪಾಲಿಕೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಚ್ಛತಾ ಸಿಬ್ಬಂದಿ, ಕಾರ್ಮಿಕರು, ಪೌರಕಾರ್ಮಿಕರು ಮತ್ತು ಗುರುತಿಸಿದ ಮ್ಯಾನ್ಯುವಲ್ ಸ್ಕ್ಯಾವೆಂಜರ್ ಮತ್ತು ಮೃತಪಟ್ಟ ಮ್ಯಾನ್ಯುವಲ್ ಸ್ಕ್ಯಾವೆಂಜರ್ ಅವಲಂಬಿತರೊಂದಿಗೆ ಏರ್ಪಡಿಸಿದ್ದ ನೇರ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪೌರಕಾರ್ಮಿಕರು ತಾವು ತೆಗೆದುಕೊಳ್ಳುವ ಕಸದ ಜೊತೆಯೇ ಚೂಪಾದ ವಸ್ತು, ವಿಷಕಾರಿ ವಸ್ತುಗಳು ಕಂಡು ಬರುತ್ತವೆ ಅವು ತಮಗೆ ಅಪಾಯವನ್ನು ಉಂಟುಮಾಡುತ್ತವೆ. ಹಾಗಾಗಿ ತಮ್ಮ ಸುರಕ್ಷತೆಗಾಗಿ ಮತ್ತು ಆರೋಗ್ಯ ಹಿತದೃಷ್ಟಿಯಿಂದ ತಪ್ಪದೇ ಸುರಕ್ಷತಾ ಪರಿಕರಗಳನ್ನು ಧರಿಸಬೇಕು ಎಂದು ತಿಳಿಸಿದರು.

ಮಹಾನಗರ ಪಾಲಿಕೆಯ ಪೌರಕಾರ್ಮಿಕರ ಮುಖಂಡರಾದ ರತ್ನಮ್ಮ ಅವರು ಮಾತನಾಡಿ, ಕಳೆದ ನಾಲ್ಕು ತಿಂಗಳಿಂದ ವೇತನ ಪಾವತಿಯಾಗಿಲ್ಲ ಈ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಕಾರ್ಯದರ್ಶಿಯವರ ಗಮನಕ್ಕೆ ತಂದರು.

ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪೌರಕಾರ್ಮಿಕರಿಗೆ ಸುಸಜ್ಜಿತ ವಿಶ್ರಾಂತಿ ಕೊಠಡಿ ಸೌಲಭ್ಯವಿಲ್ಲ ಎಂದು ಪೌರಕಾರ್ಮಿಕರು ಕಾರ್ಯದರ್ಶಿಯವರ ಗಮನಕ್ಕೆ ತಂದಾಗ, ಇದಕ್ಕೆ ಪ್ರತಿಕ್ರಿಯಿಸಿದ ಪಾಲಿಕೆ ಆಯುಕ್ತ, ಶಾಸಕರ ಅನುದಾನದಲ್ಲಿ ಮುಂದಿನ ವರ್ಷದಲ್ಲಿ ನಗರದ ಮೂರು ಭಾಗದಲ್ಲಿ ಸುಸಜ್ಜಿತ ವಿಶ್ರಾಂತಿ ಕೊಠಡಿಗಳನ್ನು ನಿರ್ಮಿಸಿಕೊಡಲಾಗುವುದು ಎಂದು ತಿಳಿಸಿದರು.

ಮುಂಡರಗಿ ಆಶ್ರಯ ವಸತಿ ಯೋಜನೆಯಡಿ 5000 ಮನೆಗಳು ನಿರ್ಮಾಣಗೊಳ್ಳುತ್ತಿದ್ದು, ಇದರಲ್ಲಿ 200 ಮನೆಗಳನ್ನು ಪೌರಕಾರ್ಮಿಕರಿಗಾಗಿಯೇ ಮೀಸಲಿರಿಸಲಾಗಿದೆ. ಸರ್ಕಾರದ ಈ ವಸತಿ ಸೌಲಭ್ಯ ಪಡೆಯಲು ಪೌರಕಾರ್ಮಿಕರು ಮುಂದೆ ಬರಬೇಕು ಎಂದು ಪಾಲಿಕೆ ಆಯುಕ್ತರು ಎಂದರು.

ಇದೇ ವೇಳೆ ವೇತನ ಪಾವತಿ, ನೇರಪಾವತಿ, ಬೆಳಗಿನ ಉಪಾಹಾರ ವಿತರಣೆ, ಇಪಿಎಫ್ ಮತ್ತು ಇಎಸ್‍ಐ ಪಾವತಿ ಕುರಿತು ಪೌರಕಾರ್ಮಿಕರ ಜೊತೆ ಚರ್ಚಿಸಿ ಮಾಹಿತಿ ಪಡೆದುಕೊಂಡರು.

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಚಿದಾನಂದ, ಜಿಲ್ಲಾ ಸಫಾಯಿ ಕರ್ಮಚಾರಿ ವಿಭಾಗದ ಜಿಲ್ಲಾ ಜಾಗೃತಿ ಸಮಿತಿಯ ಸದಸ್ಯ ಕಂದಕೂರು ರಾಮುಡು, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಕಾರ್ಯದರ್ಶಿಯವರ ಆಪ್ತ ಕಾರ್ಯದರ್ಶಿ ರಾಘು, ಜಿಲ್ಲಾ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ತಾಲ್ಲೂಕು ಅಭಿವೃದ್ಧಿ ಅಧಿಕಾರಿ ಲಕ್ಷ್ಮಣ ಸೇರಿದಂತೆ ಪಾಲಿಕೆಯ ಪರಿಸರ ಅಭಿಯಂತರರು, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಪೌರಕಾರ್ಮಿಕರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande