ನವದೆಹಲಿ, 25 ಜುಲೈ (ಹಿ.ಸ.) :
ಆ್ಯಂಕರ್ : ತಮಿಳುನಾಡಿನಿಂದ ರಾಜ್ಯಸಭೆಗೆ ಹೊಸದಾಗಿ ಆಯ್ಕೆಯಾದ ಐವರು ಸದಸ್ಯರು ಇಂದು ಪ್ರಮಾಣವಚನ ಸ್ವೀಕರಿಸಿದರು. ಇವರಲ್ಲಿ ನಟ ಹಾಗೂ ಮಕ್ಕಳ್ ನಿಧಿ ಮಯ್ಯಂ ಪಕ್ಷದ ಸಂಸ್ಥಾಪಕ ಕಮಲ್ ಹಾಸನ್ ಪ್ರಮುಖರಾಗಿದ್ದು, ಅವರು ತಮಿಳು ಭಾಷೆಯಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಉಳಿದವರು ಪಿ. ವಿಲ್ಸನ್, ಎಸ್.ಆರ್. ಶಿವಲಿಂಗಂ ಮತ್ತು ರಜತಿ ಸಲ್ಮಾ ಪ್ರಮಾಣ ವಚನ ಸ್ವೀಕರಿಸಿದರು.
ಕಮಲ್ ಹಾಸನ್ ಅವರನ್ನು ಡಿಎಂಕೆ ಮೈತ್ರಿಕೂಟದ ಬೆಂಬಲದೊಂದಿಗೆ ಜೂನ್ 12ರಂದು ಅವಿರೋಧವಾಗಿ ಆಯ್ಕೆ ಮಾಡಲಾಗಿತ್ತು. 2017ರಲ್ಲಿ ರಾಜಕೀಯಕ್ಕೆ ಕಾಲಿಟ್ಟ ಹಾಸನ್, ಭ್ರಷ್ಟಾಚಾರ ವಿರೋಧ, ಗ್ರಾಮೀಣಾಭಿವೃದ್ಧಿ ಹಾಗೂ ಪರಿಸರ ಕುರಿತ ಹೋರಾಟಕ್ಕೆ ತಮ್ಮ ಪಕ್ಷವನ್ನು ಸ್ಥಾಪಿಸಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa