ಮಂಗಳೂರು, 25 ಜುಲೈ (ಹಿ.ಸ.) :
ಆ್ಯಂಕರ್ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯ ಹಿನ್ನೆಲೆ ಮತ್ತು ಕೆಂಪು ಎಚ್ಚರಿಕೆ ಜಾರಿಯಲ್ಲಿರುವ ಕಾರಣದಿಂದ, ಜುಲೈ 25ರಂದು ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪಿಯು ಕಾಲೇಜು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದು ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತದಿಂದ ಕೈಗೊಳ್ಳಲಾಗಿದ್ದು, ನದಿತೀರ, ಕೆರೆ, ತಗ್ಗು ಪ್ರದೇಶಗಳಿಗೆ ಮಕ್ಕಳು ಹಾಗೂ ಸಾರ್ವಜನಿಕರು ತೆರಳಬಾರದು ಎಂದು ಎಚ್ಚರಿಕೆ ನೀಡಲಾಗಿದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕಚೇರಿಯಲ್ಲಿ ಲಭ್ಯವಿರಬೇಕು ಮತ್ತು ಸಾರ್ವಜನಿಕರಿಂದ ಬರುವ ದೂರುಗಳಿಗೆ ತ್ವರಿತ ಸ್ಪಂದನೆ ನೀಡಬೇಕು ಹಾಗೂ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು ಸೂಚಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa