ಬಳ್ಳಾರಿ, 25 ಜುಲೈ (ಹಿ.ಸ.) :
ಆ್ಯಂಕರ್ : ತಾಲ್ಲೂಕಿನ ಬೈರದೇವವನಹಳ್ಳಿ ಗ್ರಾಮದ ತಿಪ್ಪೇಸ್ವಾಮಿ(30) ಹಂಚಿನಾಳ ಗ್ರಾಮಕ್ಕೆ ಮೋಹರಂ ಹಬ್ಬಕ್ಕೆ ಹೋಗಿಬರುತ್ತೇನೆ ಎಂದು ಜು.05 ರಂದು ಹೇಳಿಹೋದವನು ಮನೆಗೆ ಬಾರದೇ ಕಾಣೆಯಾಗಿದ್ದಾರೆ ಎಂದು ಪ್ರಕರಣ ದಾಖಲಾಗಿದೆ ಎಂದು ಮೋಕ ಪೊಲೀಸ್ ಠಾಣೆಯ ಠಾಣಾಧಿಕಾರಿ ತಿಳಿಸಿದ್ದಾರೆ.
ಕಾಣೆಯಾದ ವ್ಯಕ್ತಿಯ ಚಹರೆ ಗುರುತು: ಎತ್ತರ 5.7 ಅಡಿ, ಗೋಧಿ ಮೈಬಣ್ಣ ಹೊಂದಿದ್ದು, ಎಡಗೈ ಮೇಲೆ ಸುಟ್ಟ ಗಾಯದ ಕಲೆ, ಎಡಗಾಲಿಗೆ ಗಾಯದ ಕಲೆ ಇರುತ್ತದೆ. ಕಾಣೆಯಾದ ಸಂದರ್ಭದಲ್ಲಿ ಬಿಳಿ ಅಂಗಿ, ನೀಲಿ ಕಲರ್ ಪ್ಯಾಂಟ್‍ನ್ನು ಧರಿಸಿರುತ್ತಾನೆ.
ಮೇಲ್ಕಂಡ ಚಹರೆಯುಳ್ಳ ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಮೋಕಾ ಪೆÇಲೀಸ್ ಠಾಣೆಯ ಪಿ.ಎಸ್.ಐ ಮೊ.9480803050, ದೂ.08392-293228, ಸಿರುಗುಪ್ಪ ಉಪವಿಭಾಗ ಡಿಎಸ್‍ಪಿ ಅವರ ಮೊ.9480803021, ಪಿಡಿ ಹಳ್ಳಿ ವೃತ್ತ ಸಿಪಿಐ ಅವರ ಮೊ.9480803031 ಅಥವಾ ಬಳ್ಳಾರಿ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್