ರಾಯಚೂರು, 25 ಜುಲೈ (ಹಿ.ಸ.) :
ಆ್ಯಂಕರ್ : ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣಪ್ರಕಾಶ ಆರ್. ಪಾಟೀಲ ಅವರು ಜುಲೈ 27ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ಅಂದು ಬೆಳಿಗ್ಗೆ 8 ಗಂಟೆಗೆ ಕಲಬುರಗಿಯಿಂದ ರಸ್ತೆ ಮೂಲಕ ಲಿಂಗಸುಗೂರಿಗೆ ಆಗಮಿಸಿ ಬೆಳಿಗ್ಗೆ 11 ಗಂಟೆಗೆ ಲಿಂಗಸುಗೂರು ಪಟ್ಟಣದ ವಿಜಯಮಹಾಂತೇಶ್ವರ ಶಾಖಾ ಮಠದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಘಟಕ ರಾಯಚೂರು ಹಾಗೂ ವಾರ್ತಾ ಮತ್ತು ಸಂಪರ್ಕ ಇಲಾಖೆ ರಾಯಚೂರು ಇವರ ಸಂಯುಕ್ತಾಶ್ರಯದಲ್ಲಿ ನಡೆಯಲಿರುವ ಜಿಲ್ಲಾಮಟ್ಟದ ಪತ್ರಿಕಾ ದಿನಾಚರಣೆ ಹಾಗೂ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ಮಧ್ಯಾಹ್ನ 2.30ಕ್ಕೆ, ಲಿಂಗಸುಗೂರು ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಲಾದ ಡಾ.ಬಿ.ಆರ್.ಅಂಬೇಡ್ಕರ್ ಭವನ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 3 ಗಂಟೆಗೆ ಪಟ್ಟಣದ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಲಿರುವ ಲಿಂಗಸುಗೂರು ತಾಲ್ಲೂಕಿನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸುವರು. ಸಂಜೆ 5.30ಕ್ಕೆ ಲಿಂಗಸುಗೂರಿನಿಂದ ರಸ್ತೆ ಮೂಲಕ ಕಲಬುರಗಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿಗಳಾದ ಕೃಷ್ಣಗೌಡ ತಾಯಣ್ಣವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್