ಸಫಾಯಿ ಕರ್ಮಚಾರಿಗಳು, ಪೌರಕಾರ್ಮಿಕರಿಗೆ ಅಗತ್ಯ ಸೌಲಭ್ಯ ತಲುಪಿಸಿ : ಚಂದ್ರಕಲಾ
ಬಳ್ಳಾರಿ, 25 ಜುಲೈ (ಹಿ.ಸ.) : ಆ್ಯಂಕರ್ : ಜಿಲ್ಲೆಯಲ್ಲಿ ಸಫಾಯಿ ಕರ್ಮಚಾರಿಗಳು ಮತ್ತು ಪೌರಕಾರ್ಮಿಕರಿಗೆ ದೊರಕಬೇಕಾದ ಎಲ್ಲ ಸೌಲಭ್ಯಗಳನ್ನು ನೀಡಬೇಕು ಹಾಗೂ ಅವರಲ್ಲಿ ಸೌಲಭ್ಯಗಳ ಕುರಿತು ಅರಿವು ಮೂಡಿಸುವ ಕೆಲಸ ಮಾಡಬೇಕು ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಕಾರ್ಯದರ್ಶಿ ಚಂದ್ರಕಲಾ ಅವರು
ಸಫಾಯಿ ಕರ್ಮಚಾರಿಗಳು, ಪೌರಕಾರ್ಮಿಕರಿಗೆ ಅಗತ್ಯ ಸೌಲಭ್ಯ ತಲುಪಿಸಿ: ಚಂದ್ರಕಲಾ


ಸಫಾಯಿ ಕರ್ಮಚಾರಿಗಳು, ಪೌರಕಾರ್ಮಿಕರಿಗೆ ಅಗತ್ಯ ಸೌಲಭ್ಯ ತಲುಪಿಸಿ: ಚಂದ್ರಕಲಾ


ಬಳ್ಳಾರಿ, 25 ಜುಲೈ (ಹಿ.ಸ.) :

ಆ್ಯಂಕರ್ : ಜಿಲ್ಲೆಯಲ್ಲಿ ಸಫಾಯಿ ಕರ್ಮಚಾರಿಗಳು ಮತ್ತು ಪೌರಕಾರ್ಮಿಕರಿಗೆ ದೊರಕಬೇಕಾದ ಎಲ್ಲ ಸೌಲಭ್ಯಗಳನ್ನು ನೀಡಬೇಕು ಹಾಗೂ ಅವರಲ್ಲಿ ಸೌಲಭ್ಯಗಳ ಕುರಿತು ಅರಿವು ಮೂಡಿಸುವ ಕೆಲಸ ಮಾಡಬೇಕು ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಕಾರ್ಯದರ್ಶಿ ಚಂದ್ರಕಲಾ ಅವರು ಹೇಳಿದರು.

ನಗರದ ಜಿಲ್ಲಾಧಿಕಾರಿ ಸಭಾoಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಸಫಾಯಿ ಕರ್ಮಚಾರಿಗಳ ಜಾಗೃತಿ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಏಜೆನ್ಸಿಗಳು ಪೌರಕಾರ್ಮಿಕರಿಗೆ ಅಗತ್ಯವಾದ ಸಮವಸ್ತ್ರ, ಗಮ್ ಬೂಟ್, ಕೈಗವಸು, ಮಾಸ್ಕ್ ಮತ್ತು ಇತರೆ ಸುರಕ್ಷಣಾ ಪರಿಕರಗಳನ್ನು ಸಮರ್ಪಕವಾಗಿ ನೀಡಬೇಕು. ಆರೋಗ್ಯ ನಿರೀಕ್ಷಕರು ಮತ್ತು ಮೇಸ್ತ್ರಿಗಳು ಸುರಕ್ಷತಾ ಪರಿಕರಗಳನ್ನು ಧರಿಸುವಂತೆ ಪ್ರೇರೇಪಿಸಬೇಕು ಹಾಗೂ ಏಜೆನ್ಸಿಗಳು ಮತ್ತು ಪೌರಸಂಸ್ಥೆಗಳು ಧರಿಸುವುದನ್ನು ಕಡ್ಡಾಯಗೊಳಿಸಬೇಕು. ಇಲ್ಲವಾದಲ್ಲಿ ಅನೇಕ ಆರೋಗ್ಯದ ಸಮಸ್ಯೆಗಳು ಉಂಟಾಗಿ ಗಂಭೀರವಾಗಿ ಪರಿಣಿಮಿಸುತ್ತವೆ ಎಂದು ಎಚ್ಚರಿಕೆ ನೀಡಿದರು.

ಪೌರಕಾರ್ಮಿಕರು, ಸಫಾಯಿ ಕರ್ಮಚಾರಿಗಳ ಆರೋಗ್ಯ ಬಹಳ ಮುಖ್ಯ. ಇವರು ನಗರವನ್ನು ಸ್ವಚ್ಚಗೊಳಿಸಿದಂತೆ ತಮ್ಮ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಬೇಕು. ಅವರ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ನಮ್ಮೆಲ್ಲರ ಜವಾಬ್ದಾರಿ ಕೂಡ ಆಗಿದೆ ಎಂದರು.

ಪಿಎಫ್, ಇಎಸ್‍ಐ, ಕಾರ್ಮಿಕ ಇಲಾಖೆ, ಆರೋಗ್ಯ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಪೌರಕಾರ್ಮಿಕರು ಮತ್ತು ಸಫಾಯಿ ಕರ್ಮಚಾರಿಗಳಿಗೆ ದೊರಕುವ ಸೌಲಭ್ಯಗಳ ಕುರಿತು ಅರಿವು ಕಾರ್ಯಾಗಾರವನ್ನು ಹಮ್ಮಿಕೊಳ್ಳಬೇಕು ಎಂದು ಸೂಚನೆ ನೀಡಿದರು.

ಸಿಂಗಾಪುರ ಮತ್ತು ಒಡಿಶಾ ಮಾದರಿ ವಿಶ್ರಾಂತಿ ಗೃಹ ನಿರ್ಮಿಸಲು ವಿನ್ಯಾಸ:

ವಿದೇಶದ ಸಿಂಗಾಪುರ, ಒಡಿಶಾ ರಾಜ್ಯ ಮಾದರಿಯಲ್ಲಿ ಪೌರಕಾರ್ಮಿಕರಿಗೆ ತಮ್ಮ ಪರಿಕರಗಳನ್ನು ಇಡಲು, ಶೌಚಾಲಯ ಬಳಸಲು ಮತ್ತು ವಿಶ್ರಾಂತಿಗೆ ತುಂಬಾ ಅಚ್ಚುಕಟ್ಟಾದ ವಿಶ್ರಾಂತಿ ಗೃಹ ನಿರ್ಮಿಸಲಾಗಿದೆ. ಇದೇ ಮಾದರಿಯಲ್ಲಿ ರಾಜ್ಯದಲ್ಲೂ ನಿರ್ಮಿಸಲು ವಿನ್ಯಾಸವನ್ನು ಸದ್ಯದಲ್ಲಿ ಅಂತಿಮಗೊಳಿಸಿ ಎಲ್ಲಾ ಜಿಲ್ಲೆಗಳಿಗೂ ಕಳುಹಿಸಲಾಗುವುದು ಎಂದು ಆಯೋಗದ ಕಾರ್ಯದರ್ಶಿ ಚಂದ್ರಕಲಾ ತಿಳಿಸಿದರು.

ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಸಂಶೋಧನಾಧಿಕಾರಿ ಮಹಾದೇವಸ್ವಾಮಿ ಅವರು ಮಾತನಾಡಿ, ಪೌರಕಾರ್ಮಿಕರು, ಸಫಾಯಿ ಕರ್ಮಚಾರಿಗಳು, ಲೋಡರ್ಸ್, ಕ್ಲೀನರ್ಸ್, ವಾಹನಚಾಲಕರಿಗೆ ನಿಗದಿತ ವೇಳೆಯೊಳಗೆ ವೇತನ ಪಾವತಿಸಿ, ವೇತನ ಸ್ಲಿಪ್ ನೀಡಬೇಕು. ಪಿಎಫ್ ಮತ್ತು ಇಎಸ್‍ಐ ಮೊತ್ತ ಸರಿಯಾಗಿ ಕಟಾವಣೆಯಾಗುತ್ತಿದೆಯೇ ಎಂದು ಖಾತ್ರಿಪಡಿಸಿಕೊಳ್ಳಬೇಕು.

ಮಾಸ್ಟರ್ ಆರೋಗ್ಯ ತಪಾಸಣೆ ಕಾಲ ಕಾಲಕ್ಕೆ ಮಾಡಿಸಬೇಕು. ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್, ವೇತನ ಪ್ಯಾಕೇಜ್ ಸೌಲಭ್ಯ ದೊರೆಯುವಂತೆ ಮಾಡಬೇಕು ಎಂದು ತಿಳಿಸಿದರು.

ನೇರಪಾವತಿ ಮತ್ತು ಹೊರಗುತ್ತಿಗೆ ಕಾರ್ಮಿಕರಿಗೂ ಗೃಹಭಾಗ್ಯ ಯೋಜನೆ ಸೌಲಭ್ಯ ನೀಡಬೇಕು. ಮ್ಯಾನುಯಲ್ ಸ್ಕ್ಯಾವೆಂಜರ್ ಗಳ ಬಗ್ಗೆ ನಿಖರ ಮಾಹಿತಿಯನ್ನು ಸಂಗ್ರಹಿಸಲು ಮೊಬೈಲ್ ಆಪ್‍ನ್ನು ಸಿದ್ದಪಡಿಸಲಾಗಿದ್ದು, ಸಮರ್ಪಕ ಮತ್ತು ನಿಖರ ಮಾಹಿತಿ ನೀಡಬೇಕು. ಹೀಗೆ ನೀಡಿದಾಗ ಮಾತ್ರ ಅವರಿಗೆ ದೊರಕಬೇಕಾದ ಸೌಲಭ್ಯಗಳನ್ನು ನೀಡಲು ಸಾಧ್ಯವಾಗುತ್ತದೆ ಎಂದರು.

ಕೆಕೆಆರ್‍ಟಿಸಿ ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲಿ ಕೆಲಸ ಮಾಡುತ್ತಿರುವ ಪೌರಕಾರ್ಮಿಕರಿಗೆ ನಿಗದಿತ ಕನಿಷ್ಟ ವೇತನ ಪಾವತಿಯಾಗದಿದ್ದರೆ ಅಂತಹ ಏಜೆನ್ಸಿದಾರರನ್ನು ಕಪ್ಪುಪಟ್ಟಿಗೆ ಸೇರಿಸಬೇಕು ಎಂದು ಜಿಲ್ಲಾ ಶಸ್ತ್ರಚಿಕಿತ್ಸಕರಿಗೆ ತಾಕೀತು ಮಾಡಿದರು.

ಸರ್ಕಾರವು ಪೌರ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚು ಒತ್ತು ನೀಡಿದೆ. ಕರ್ನಾಟಕ ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಿಂದ ಪೌರಕಾರ್ಮಿಕರು, ಸ್ಕ್ಯಾವೆಂಜರ್ ಮಕ್ಕಳಿಗೆ ಪ್ರವೇಶ ಪರೀಕ್ಷೆ ಇಲ್ಲದೆ ಪ್ರವೇಶಾತಿ ಕಲ್ಪಿಸಲು ವ್ಯವಸ್ಥೆ ಮಾಡಬೇಕು. ಪ್ರತಿಷ್ಠಿತ ಶಾಲೆಗಳಲ್ಲಿ ಉಚಿತ ಶಿಕ್ಷಣ ಪಡೆಯುವ ಸಲುವಾಗಿ ಈ ಸಮುದಾಯದ ಮಕ್ಕಳಿಗೆ ಶೇ.5ರಷ್ಟು ಸೀಟುಗಳನ್ನು ಮೀಸಲಿಡಲಾಗಿದೆ ಎಂದು ತಿಳಿಸಿದರು.

ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಸಿ:

ನವೆಂಬರ್ 07 ರಂದು ಅಂಬೇಡ್ಕರ್ ಅವರು ಶಾಲೆಗೆ ಸೇರಿದ ದಿನದ ಅಂಗವಾಗಿ ಎಸೆಸೆಲ್ಸಿ, ಪಿಯುಸಿ, ಉನ್ನತ ಶಿಕ್ಷಣ ಪಡೆದ ಪೌರಕಾರ್ಮಿಕರ ಮಕ್ಕಳನ್ನು ಗುರುತಿಸಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಸಬೇಕು ಎಂದು ಹೇಳಿದರು.

ಮೂರು ತಿಂಗಳಿಗೊಮ್ಮೆ ಸಭೆ ನಡೆಸಿ:

ಪ್ರತಿ ಮೂರು ತಿಂಗಳಿಗೊಮ್ಮೆ ಕಡ್ಡಾಯವಾಗಿ ಪೌರಕಾರ್ಮಿಕರ ಸಭೆ ಕರೆದು ಅವರ ಸಮಸ್ಯೆಗಳನ್ನು ಆಲಿಸಬೇಕು. ಅವರ ಪುನರ್ವಸತಿಗಾಗಿ ಸರ್ಕಾರ ರೂಪಿಸಿರುವ ನೀತಿ-ನಿಯಮಗಳ ಅರಿವು ಮೂಡಿಸಬೇಕು. ಅಧಿಕಾರಿಗಳು ಕಾಯ್ದೆಯನ್ವಯ ಪೌರಕಾರ್ಮಿಕರಿಗೆ ಅಗತ್ಯ ಮೂಲಸೌಲಭ್ಯಗಳನ್ನು ಸಮರ್ಪಕವಾಗಿ ತಲುಪಿಸಬೇಕು ಎಂದರು.

ಸಭೆಯಲ್ಲಿ ಮರಣಹೊಂದಿದ ಸಫಾಯಿ ಕರ್ಮಚಾರಿಗಳು, ಪೌರಕಾರ್ಮಿಕರ ವಿವಿಧ ಪ್ರಕರಣಗಳ ಕುರಿತು ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಸಫಾಯಿ ಕರ್ಮಚಾರಿ ವಿಭಾಗದ ಜಿಲ್ಲಾ ಮಟ್ಟದ ಜಾಗೃತಿ ಸಮಿತಿಯ ಸದಸ್ಯ ಕಂದಕೂರು ರಾಮುಡು, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶಿಶಿಕಾಂತ್ ಶಿವಪುರ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಚಿದಾನಂದ, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ರಾಘವೇಂದ್ರ ಗುರು ಸೇರಿದಂತೆ ವಿವಿಧ ನಗರಸಭೆ, ಪುರಸಭೆ ಮತ್ತು ಪಟ್ಟಣಪಂಚಾಯಿತಿ ಮುಖ್ಯಾಧಿಕಾರಿಗಳು, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಮತ್ತು ಪೌರಕಾರ್ಮಿಕರು ಉಪಸ್ತಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande