ಬಳ್ಳಾರಿ, 25 ಜುಲೈ (ಹಿ.ಸ.) :
ಆ್ಯಂಕರ್ : ಬಳ್ಳಾರಿ, ರಾಯಚೂರು, ಕೊಪ್ಪಳ ಮತ್ತು ವಿಜಯನಗರ ಜಿಲ್ಲೆಯ ಹಾಲು ಒಕ್ಕೂಟದ ನೂತನ ಅಧ್ಯಕ್ಷರಾಗಿ ಕೊಪ್ಪಳದ ಶಾಸಕ ರಾಘವೇಂದ್ರ ಹಿಟ್ನಾಳ್ ಮತ್ತು ಕಾರಟಗಿರಯ ಎನ್. ಸತ್ಯನಾರಾಯಣ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಬಳ್ಳಾರಿ ಸಹಾಯಕ ಆಯುಕ್ತರು, ಚುನಾವಣಾ ಅಧಿಕಾರಿಗಳಾಗಿದ್ದ ಪ್ರಮೋದ್ ಅವರು, ನೂತನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಅವಿರೋಧ ಆಯ್ಕೆಯನ್ನು ಘೋಷಣೆ ಮಾಡಿದರು.
ಬಳ್ಳಾರಿ, ರಾಯಚೂರು, ಕೊಪ್ಪಳ ಮತ್ತು ವಿಜಯನಗರ ಜಿಲ್ಲೆಯ ಹಾಲು ಒಕ್ಕೂಟದ ಹಾಲಿ ನಿರ್ದೇಶಕ, ಮಾಜಿ ಅಧ್ಯಕ್ಷ, ಮಾಜಿ ಶಾಸಕ ಎಲ್.ಬಿ.ಪಿ. ಭೀಮಾನಾಯ್ಕ ಅವರು ಮತ್ತೊಂದು ಅವಧಿಗೆ ಅಧ್ಯಕ್ಷರಾಗಲು ಚುನಾವಣಾ ಪೂರ್ವಾವಧಿಯಿಂದಲೂ ಪ್ರಯತ್ನಪಟ್ಟಿದ್ದು, ವಿಫಲವಾಯಿತು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್