ರಾಯಚೂರು, 25 ಜುಲೈ (ಹಿ.ಸ.) :
ಆ್ಯಂಕರ್ : ತಾಲೂಕಿನ ಯರಗೇರಾ ಪೊಲೀಸ್ ಠಾಣಾ ವ್ಯಾಪ್ತಿಯ ಗಾರಲದಿನ್ನಿ ಗ್ರಾಮದ ನಿವಾಸಿ ಹುಲಿಗೆಮ್ಮ ಗಂಡ ಶ್ರೀನಿವಾಸ (27) ಕಾಣೆಯಾಗಿದ್ದು, ಈ ಕುರಿತು ಯರಗೇರಾ ಪೊಲೀಸ್ ಠಾಣೆಯಲ್ಲಿ ಗುನ್ನೆ ಸಂಖ್ಯೆ: 112/2025 ಕಲಂ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಕಾಣೆಯಾದ ಮಹಿಳೆಯ ಚಹರೆ: ವಯಸ್ಸು 27, ಜಾತಿ ಉಪ್ಪಾರ, ಗೋಧಿ ಮೈಬಣ್ಣ, ದುಂಡನೆಯ ಮುಖ, ಉದ್ದನೆಯ ಮೂಗು, ಸಾಧಾರಣ ಮೈಕಟ್ಟು, ಗೋಧಿ ಬಣ್ಣದ ಚೂಡಿದಾರ ಬಟ್ಟೆಗಳನ್ನು ಧರಿಸಲಾಗಿದ್ದು, 10ನೇ ತಗರತಿ ವಿದ್ಯಾರ್ಹತೆ ಪಡೆದಿದ್ದು, ಕನ್ನಡ ಹಾಗೂ ತೆಲುಗು ಭಾಷೆ ಮಾತನಾಡುತ್ತಾಳೆ. ಈ ಮಹಿಳೆ ಬಗ್ಗೆ ಸುಳಿವು ಸಿಕ್ಕಲ್ಲಿ ಯರಗೇರಾ ಪೊಲೀಸ್ ಠಾಣೆಯನ್ನು ಸಂಪರ್ಕ ಮಾಡುವಂತೆ ಯರಗೇರಾ ಠಾಣೆಯ ಅಧಿಕಾರಿಗಳು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್