ಥೈಲ್ಯಾಂಡ್‌ ಚಿತ್ರಿಕರಣ ಮುಗಿಸಿ ನಟ ದರ್ಶನ್ ಬೆಂಗಳೂರಿಗೆ
ಬೆಂಗಳೂರು, 26 ಜುಲೈ (ಹಿ.ಸ.) : ಆ್ಯಂಕರ್ : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್, ಥೈಲ್ಯಾಂಡ್‌ನಲ್ಲಿ ನಡೆಯುತ್ತಿದ್ದ ಡೆವಿಲ್ ಚಲನಚಿತ್ರದ ಅಂತಿಮ ಹಂತದ ಚಿತ್ರೀಕರಣ ಮುಗಿಸಿ ತಡ ರಾತ್ರಿ ಬೆಂಗಳೂರಿಗೆ ವಾಪಸಾಗಿದ್ದಾರೆ. ವಿಮಾನ ನಿಲ್ದಾಣದಿಂದ ನೇರವಾಗಿ ದರ
Darshan


ಬೆಂಗಳೂರು, 26 ಜುಲೈ (ಹಿ.ಸ.) :

ಆ್ಯಂಕರ್ : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್, ಥೈಲ್ಯಾಂಡ್‌ನಲ್ಲಿ ನಡೆಯುತ್ತಿದ್ದ ಡೆವಿಲ್ ಚಲನಚಿತ್ರದ ಅಂತಿಮ ಹಂತದ ಚಿತ್ರೀಕರಣ ಮುಗಿಸಿ ತಡ ರಾತ್ರಿ ಬೆಂಗಳೂರಿಗೆ ವಾಪಸಾಗಿದ್ದಾರೆ.

ವಿಮಾನ ನಿಲ್ದಾಣದಿಂದ ನೇರವಾಗಿ ದರ್ಶನ್ ಕಾರಿನಲ್ಲಿ ಮನೆಗೆ ತೆರಳಿದ್ದು, ಚಿತ್ರೀಕರಣ ಕಾರ್ಯದಲ್ಲಿ ಅವರ ಪತ್ನಿ ವಿಜಯಲಕ್ಷ್ಮಿ, ನಟ ಧನ್ವಿರ್ ಮತ್ತು ಇತರ ಚಿತ್ರತಂಡದ ಸದಸ್ಯರು ಸಹ ಭಾಗಿಯಾಗಿದ್ದರು.

ಇದೇ ವೇಳೆ, ದರ್ಶನ್ ಅವರಿಗೆ ಈಗಾಗಲೇ ಸಿಕ್ಕಿರುವ ಜಾಮೀನು ರದ್ದುಗೊಳಿಸಬೇಕು ಎಂಬ ರಾಜ್ಯ ಸರಕಾರದ ಮನವಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ಪೂರ್ಣಗೊಂಡಿದ್ದು, ತೀರ್ಪು ಕಾಯ್ದಿರಿಸಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande