ವಿಶ್ವ ಹಿರಿಯ ನಾಗರೀಕರ ದಿನಾಚರಣೆ : ವಯೋಶ್ರೇಷ್ಠರಿಗೆ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ
ಹೊಸಪೇಟೆ, 26 ಜುಲೈ (ಹಿ.ಸ.) : ಆ್ಯಂಕರ್ : ಅಕ್ಟೋಬರ್ 1 ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ರಾಜ್ಯಮಟ್ಟದಲ್ಲಿ ಆಚರಿಸುವ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಹಿರಿಯ ನಾಗರಿಕರ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ ರಾಜ್ಯ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದ
ವಿಶ್ವ ಹಿರಿಯ ನಾಗರೀಕರ ದಿನಾಚರಣೆ : ವಯೋಶ್ರೇಷ್ಠರಿಗೆ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ


ಹೊಸಪೇಟೆ, 26 ಜುಲೈ (ಹಿ.ಸ.) :

ಆ್ಯಂಕರ್ : ಅಕ್ಟೋಬರ್ 1 ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ರಾಜ್ಯಮಟ್ಟದಲ್ಲಿ ಆಚರಿಸುವ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಹಿರಿಯ ನಾಗರಿಕರ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ ರಾಜ್ಯ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.

ಶಿಕ್ಷಣ, ಸಾಹಿತ್ಯ, ಕಲೆ, ಕಾನೂನು, ಪ್ರತಿಭೆ, ಕ್ರೀಡೆ ಹಾಗೂ ಸಮಾಜ ಸೇವೆ ಕ್ಷೇತ್ರಗಳಲ್ಲಿ ಗಣನೀಯವಾಗಿ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ ರಾಜ್ಯ ಮಟ್ಟದಲ್ಲಿ 6 ವೈಯಕ್ತಿಕ ಪ್ರಶಸ್ತಿಗಳನ್ನು ಹಾಗೂ ಹಿರಿಯ ನಾಗರಿಕ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಒಂದು ಸಂಸ್ಥೆಗೆ ಒಟ್ಟು 7 ಪ್ರಶಸ್ತಿಗಳನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲಾ ವ್ಯಾಪ್ತಿಗೆ ಬರುವ ಹಿರಿಯ ನಾಗರಿಕರು ಮತ್ತು ಸಂಸ್ಥೆಗಳಿಂದ ನಿಗಧಿತ 1, 2 ರ ನಮೂನೆಯನ್ನು ಕನ್ನಡ ಭಾμÉಯಲ್ಲಿ ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ ಅಗಸ್ಟ್ 25 ರೊಳಗಾಗಿ ದ್ವಿಪ್ರತಿಯಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅವಧಿ ಮೀರಿ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ವೆಬ್‍ಸೈಟ್: www.dwdsc.karnataka.gov.in ನ್ನು ಪರಿಶೀಲಿಸಿ ಹಾಗೂ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಲು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande