ಮೀನು ಕೃಷಿಕರಿಂದ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ಹೊಸಪೇಟೆ, 26 ಜುಲೈ (ಹಿ.ಸ.) : ಆ್ಯಂಕರ್ : 2025-26 ಸಾಲಿನ ಮೀನುಗಾರಿಕೆ ಇಲಾಖೆ ವತಿಯಿಂದ ಜಿಲ್ಲಾ ಪಂಚಾಯಿತಿಯ ಯೋಜನೆಗಳಡಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ. ಒಳನಾಡು ಮೀನುಗಾರಿಕೆ ಅಭಿವೃದ್ಧಿಗೆ ಸಹಾಯ ಯೋಜನೆಯಡಿ ಪರ
ಮೀನು ಕೃಷಿಕರಿಂದ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ


ಹೊಸಪೇಟೆ, 26 ಜುಲೈ (ಹಿ.ಸ.) :

ಆ್ಯಂಕರ್ : 2025-26 ಸಾಲಿನ ಮೀನುಗಾರಿಕೆ ಇಲಾಖೆ ವತಿಯಿಂದ ಜಿಲ್ಲಾ ಪಂಚಾಯಿತಿಯ ಯೋಜನೆಗಳಡಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ಒಳನಾಡು ಮೀನುಗಾರಿಕೆ ಅಭಿವೃದ್ಧಿಗೆ ಸಹಾಯ ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮೀನು ಕೃಷಿಕರಿಗೆ 10 ಸಾವಿರ ರೂ. ವೆಚ್ಚದಲ್ಲಿ ಉಚಿತ ಮೀನುಗಾರಿಕೆ ಸಲಕರಣೆ ಕಿಟ್‍ಗಳನ್ನು ವಿತರಿಸಲಾಗುವುದು. ಮೀನು ಮಾರುಕಟ್ಟೆಗಳ ನಿರ್ಮಾಣ ಮತ್ತು ಮೀನು ಮಾರಾಟಕ್ಕೆ ಸಹಾಯ ಮತ್ಸ್ಯವಾಹಿನಿ ಯೋಜನೆಯಡಿ ಐಸ್ ಬಾಕ್ಸ್‍ನೊಂದಿಗೆ ಮೊಪೆಡ್ ಖರೀದಿಸಲು ಸಹಾಯಧನ ನೀಡಲಾಗುತ್ತದೆ.

ಆಗಸ್ಟ್ 16 ರಂದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ನಿಗಧಿಪಡಿಸಲಾಗಿದೆ. ಅರ್ಹ ಅರ್ಜಿದಾರರು ಅಗತ್ಯ ದಾಖಲೆಗಳೊಂದಿಗೆ ವೆಬ್‍ಸೈಟ್ hಣಣಠಿs://viರಿಚಿಥಿಚಿಟಿಚಿgಚಿಡಿಚಿ.ಟಿiಛಿ.iಟಿ ಭೇಟಿ ನೀಡಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವುದು. ಅಥವಾ ಆಯಾ ತಾಲೂಕಿನ ಮೀನುಗಾರಿಕೆ ಇಲಾಖೆಯ ಕಚೇರಿಯ ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರನ್ನು ಅಥವಾ ಜಿಲ್ಲೆಯ ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕರ ಕಚೇರಿಗೆ ಭೇಟಿ ನೀಡಬಹುದಾಗಿದೆ ಎಂದು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande