ಬೆಂಗಳೂರು, 26 ಜುಲೈ (ಹಿ.ಸ.) :
ಆ್ಯಂಕರ್ : ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಮತ್ತು ಪ್ರತಿಪಕ್ಷ ನಾಯಕ ಆರ್. ಅಶೋಕ್ ಇಂದು ಬೆಂಗಳೂರು ಮಹಾನಗರ ಶಾಸಕರುಗಳ ಸಭೆ ನಡೆಸಿದರು.
ಸಭೆಯಲ್ಲಿ ಮುಂಬರುವ ಬಿಬಿಎಂಪಿ ಚುನಾವಣೆ ಕುರಿತು ಸಮಗ್ರ ಚರ್ಚೆ ನಡೆಸಿ ಪಕ್ಷ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಮಾಜಿ ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಡಾ.ಅಶ್ವಥ್ ನಾರಾಯಣ್, ಬೆಂಗಳೂರು ಮಹಾನಗರದ ಎಲ್ಲಾ ಶಾಸಕರು, ಜಿಲ್ಲಾಧ್ಯಕ್ಷರುಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa