ಬಳ್ಳಾರಿ, 26 ಜುಲೈ (ಹಿ.ಸ.) :
ಆ್ಯಂಕರ್ : ಮಕ್ಕಳ ರಕ್ಷಣೆಗೆ ಕಾಯ್ದೆ-ಕಾನೂನು ರೂಪಿಸುವುದು ಅಲ್ಲದೇ, ಮಕ್ಕಳ ಬೆಳವಣಿಗೆಗೆ ಉತ್ತಮ ಪರಿಸರವನ್ನು ಸಹ ನೀಡಬೇಕಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಕೆ.ಜಿ ಶಾಂತಿ ಅವರು ಅಭಿಪ್ರಾಯಪಟ್ಟಿದ್ದಾರೆ.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ರೀಡ್ಸ್ ಸಂಸ್ಥೆ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಮತ್ತು ಅರಣ್ಯ ಇಲಾಖೆ ಬಳ್ಳಾರಿ ಇವರ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾ ನ್ಯಾಯಾಲಯದ ವಿಸಿ ಸಭಾಂಗಣದಲ್ಲಿ ಶನಿವಾರ ನಡೆದ `ಮಕ್ಕಳ ರಕ್ಷಣೆಗೆ ಕಾನೂನುಗಳು' ಪುಸ್ತಕ ಬಿಡುಗಡೆ ಮಾಡಿ ಅವರು ಮಾತನಾಡಿದರು.
ದೇಶದಲ್ಲಿ ಬಾಲಕಾರ್ಮಿಕರು, ಭಿಕ್ಷಾಟನೆ, ಮಾನವ ಕಳ್ಳ ಸಾಗಾಣಿಕೆ, ಬಾಲ್ಯ ವಿವಾಹ, ಪೆÇೀಕ್ಸೋ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿವೆ. ಬಡತನ ಮತ್ತು ಶಿಕ್ಷಣದ ಕೊರತೆ ಅನೇಕ ಮಕ್ಕಳನ್ನು ಬಾಧಿಸುತ್ತಿದೆ. ಮಕ್ಕಳ ರಕ್ಷಣೆಯಲ್ಲಿ ಎನ್‍ಜಿಒಗಳ ಪಾತ್ರವೂ ಮುಖ್ಯವಾಗಿದ್ದು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರೀಡ್ಸ್ ಸಂಸ್ಥೆ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಈ ಪುಸ್ತಕವನ್ನು ಪ್ರಕಟಿಸಲಾಗುತ್ತಿದ್ದು, ಶಾಲೆಗಳು, ಗ್ರಂಥಾಲಯಗಳಲ್ಲಿ ಪುಸ್ತಕವನ್ನು ತಪ್ಪದೇ ಇರಿಸಬೇಕು. ಮಕ್ಕಳಿಗೆ ಪುಸ್ತಕದ ಮಾಹಿತಿ ನೀಡಬೇಕು ಎಂದರು.
ಮಕ್ಕಳಿಗೆ ಬಾಲ್ಯ ವಿವಾಹ, ಪೆÇೀಕ್ಸೊ ಕಾಯ್ದೆ, ಮಕ್ಕಳ ಸುರಕ್ಷತೆ ವಿಷಯಗಳ ನೀಡಬೇಕು. ಬಾಲ್ಯವಿವಾಹದ ದುಷ್ಪರಿಣಾಮಗಲು ಇನ್ನಿತರೆಗಳ ಕುರಿತು ಜಾಗೃತಿ ಮೂಡಿಸಬೇಕು. `ಮಗುವಿಗೊಂದು ಮರ-ಶಾಲೆಗೊಂದು ವನ'
ಅಭಿಯಾನದಡಿ ಶಾಲೆಗಳಲ್ಲಿ ಗಿಡ ನೆಟ್ಟು, ಆ ಸಸಿಗಳ ಪೋಷಣೆ ಮತ್ತು ನಿರ್ವಹಣೆಯ ಹೊಣೆಯನ್ನು ಮಕ್ಕಳಿಗೆ ನೀಡಬೇಕು ಎಂದರು.
ನ್ಯಾಯಾಧೀಶರು ಕಾರ್ಗಿಲ್ ವಿಜಯ ದಿವಸ ಅಂಗವಾಗಿ ಹುತಾತ್ಮರಾದ ಯೋಧರಿಗೆ ಗೌರವ ನಮನ ಸಲ್ಲಿಸಿದರು.
ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವುದು ಅಗತ್ಯ. ಮಕ್ಕಳ ರಕ್ಷಣೆಗಿರುವ ಕಾನೂನುಗಳನ್ನು ಪ್ರತಿಯೊಬ್ಬರೂ ತಿಳಿದು, ಇತರರಿಗೂ ತಿಳಿಸುವ ಕೆಲಸವಾಗಬೇಕು ಎಂದರು.
ರೀಡ್ಸ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಸಿ. ತಿಪ್ಪೇಶಪ್ಪ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ನಿಕಟಪೂರ್ವ ಸದಸ್ಯ ಡಾ.ಹೆಚ್.ಸಿ.ರಾಘವೇಂದ್ರ ಅವರು ಪುಸ್ತಕ ಪರಿಚಯ ಮಾಡಿದರು. ಹಂಪಿ ಕನ್ನಡ ವಿಶ್ವವಿದ್ಯಾಲಯದ ಅಭಿವೃದ್ಧಿ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಡಾ. ಜನಾರ್ಧನ ಅವರು ಕಾರ್ಯಾಗಾರ ನಡೆಸಿದರು.
`ಮಗುವಿಗೊಂದು ಮರ-ಶಾಲೆಗೊಂದು ವನ' ಅಭಿಯಾನದಡಿ ಗಣ್ಯರು ನ್ಯಾಯಾಲಯದ ಆವರಣದಲ್ಲಿ ಸಸಿಗಳನ್ನು ನೆಟ್ಟರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ
ರಾಜೇಶ್ ಎನ್. ಹೊಸಮನೆ, ಬಳ್ಳಾರಿ ಪ್ರಾದೇಶಿಕ ವಿಭಾಗದ ಅರಣ್ಯ ಇಲಾಖೆಯ ಸಹಾಯಕ ಸಂರಕ್ಷಣಾಧಿಕಾರಿ ತೋಶನ್ ಕುಮಾರ್ ಸೇರಿ ನ್ಯಾಯಾಧೀಶರು, ಶಿಕ್ಷಣ ಇಲಾಖೆಯ ಅಧಿಕಾರಿಗಳು, ಅಂಗನವಾಡಿ ಸಿಬ್ಬಂದಿ ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್