ಬೆಂಗಳೂರು, 26 ಜುಲೈ (ಹಿ.ಸ.) :
ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ರಾಷ್ಟ್ರೀಯ ಸೈನಿಕ್ ಸ್ಮಾರಕ ಮ್ಯಾನೇಜ್ಮೆಂಟ್ ಟ್ರಸ್ಟ್ ವತಿಯಿಂದ ಬೆಂಗಳೂರಿನ ರಾಷ್ಟ್ರೀಯ ಸೈನಿಕ ಸ್ಮಾರಕದಲ್ಲಿ ಆಯೋಜಿಸಿದ್ದ ಕಾರ್ಗಿಲ್ ವಿಜಯ ದಿವಸ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ದೇಶದ ಹೆಮ್ಮೆಯ ಸೈನಿಕರ ತ್ಯಾಗ - ಬಲಿದಾನದ ಸಂಕೇತವಾದ ವೀರಗಲ್ಲನ್ನು ಲೋಕಾರ್ಪಣೆಗೊಳಿಸಿ, ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ, ವಸತಿ ಸಚಿವರಾದ ಜಮೀರ್ ಅಹ್ಮದ್ ಖಾನ್ ಸೇರಿದಂತೆ ಭಾರತೀಯ ಸೇನೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa