ನಾಳೆಯಿಂದ ಗಣಕಯಂತ್ರ ಶಿಕ್ಷಣ ಪರೀಕ್ಷೆ : ನಿಷೇಧಾಜ್ಞೆ ಜಾರಿ
ರಾಯಚೂರು, 26 ಜುಲೈ (ಹಿ.ಸ.) : ಆ್ಯಂಕರ್ : ಗಣಕಯಂತ್ರ ಶಿಕ್ಷಣ ಪರೀಕ್ಷೆಯು ನಾಳೆಯಿಂದ ಆಗಸ್ಟ್ 02ರವರೆಗೆ ಸುರಕ್ಷಿತವಾಗಿ ನಡೆಸಲು ರಾಯಚೂರು ತಾಲೂಕಿನ ಯರಮರಸ್ ಡಯಟ್‍ನ ಪರೀಕ್ಷಾ ಕೇಂದ್ರದ ಸುತ್ತಲು 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ಪ
ನಾಳೆಯಿಂದ ಗಣಕಯಂತ್ರ ಶಿಕ್ಷಣ ಪರೀಕ್ಷೆ : ನಿಷೇಧಾಜ್ಞೆ ಜಾರಿ


ರಾಯಚೂರು, 26 ಜುಲೈ (ಹಿ.ಸ.) :

ಆ್ಯಂಕರ್ : ಗಣಕಯಂತ್ರ ಶಿಕ್ಷಣ ಪರೀಕ್ಷೆಯು ನಾಳೆಯಿಂದ ಆಗಸ್ಟ್ 02ರವರೆಗೆ ಸುರಕ್ಷಿತವಾಗಿ ನಡೆಸಲು ರಾಯಚೂರು ತಾಲೂಕಿನ ಯರಮರಸ್ ಡಯಟ್‍ನ ಪರೀಕ್ಷಾ ಕೇಂದ್ರದ ಸುತ್ತಲು 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.

ಪರೀಕ್ಷಾ ಕೇಂದ್ರಗಳ ಸುತ್ತಲಿನ ಎಲ್ಲಾ ಝರಾಕ್ಸ ಅಂಗಡಿಗಳನ್ನು ಮತ್ತು ಸೈಬರ್ ಕೆಫೆಗಳನ್ನು ಪರೀಕ್ಷಾ ಸಮಯದಲ್ಲಿ ಕಡ್ಡಾಯವಾಗಿ ಮುಚ್ಚುವಂತೆ ಜಿಲ್ಲಾ ದಂಡಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ ಅವರು ಆದೇಶ ಹೊರಡಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande