ಶಿವಮೊಗ್ಗ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ
ಶಿವಮೊಗ್ಗ, 26 ಜುಲೈ (ಹಿ.ಸ.) : ಆ್ಯಂಕರ್ : ನಿರಂತರ ಸುರಿಯುತ್ತಿರುವ ಮಳೆ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ. ಹವಾಮಾನ ಇಲಾಖೆಯು ಜಿಲ್ಲೆಯಲ್ಲಿ ಭಾರಿ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲ
ಶಿವಮೊಗ್ಗ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ


ಶಿವಮೊಗ್ಗ, 26 ಜುಲೈ (ಹಿ.ಸ.) :

ಆ್ಯಂಕರ್ : ನಿರಂತರ ಸುರಿಯುತ್ತಿರುವ ಮಳೆ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ.

ಹವಾಮಾನ ಇಲಾಖೆಯು ಜಿಲ್ಲೆಯಲ್ಲಿ ಭಾರಿ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಕಿತ್ತಳೆ ಎಚ್ಚರಿಕೆ ಘೋಷಿಸಿದೆ. ಇದರಿಂದ, ಮುಂಜಾಗ್ರತಾ ಕ್ರಮವಾಗಿ, ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

ನಿರಂತರ ಮಳೆಯಿಂದ ಜಿಲ್ಲೆಯ ನದಿ ಕೆರೆಗಳು ಮೈದುಂಬಿ ಹರಿಯುತ್ತಿವೆ. ಮಲೆನಾಡು ಭಾಗದ ತಾಲೂಕುಗಳಲ್ಲಿ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದ್ದು, ಮಕ್ಕಳು ಶಾಲೆಗೆ ಹೋಗುವುದು ಕಠಿಣವಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande