ಕಲಬುರಗಿ, 26 ಜುಲೈ (ಹಿ.ಸ.) :
ಆ್ಯಂಕರ್ : ಕಲಬುರಗಿ ಶರಣಬಸವೇಶ್ವರ ಸಂಸ್ಥಾನದ 8ನೇ ಮಹಾದಾಸೋಹ ಪೀಠಾಧಿಪತಿ ಹಾಗೂ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಶರಣಬಸವಪ್ಪ ಅಪ್ಪಾ ಅವರ ಆರೋಗ್ಯದಲ್ಲಿ ಏರುಪೇರಾಗಿರುವ ಹಿನ್ನೆಲೆಯಲ್ಲಿ ಅವರನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ವಯೋಸಹಜ ಕಾಯಿಲೆ ಹಾಗೂ ಉಸಿರಾಟದ ಸೋಂಕಿನಿಂದ ಕಳೆದ ರಾತ್ರಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರ ತಂಡದ ಪ್ರಕಾರ ಅವರ ಆರೋಗ್ಯ ಸ್ಥಿತಿ ಈಗ ಸ್ಥಿರವಾಗಿದೆ. ಶೀಘ್ರದಲ್ಲೇ ಅವರು ಸಾಮಾನ್ಯ ಸ್ಥಿತಿಗೆ ಬರುವ ಸಾಧ್ಯತೆ ಇದೆ ಎಂದು ವೈದ್ಯರು ತಿಳಿಸಿದ್ದಾರೆ.
ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಹಾಗೂ ಸಂಘದ ಅಧ್ಯಕ್ಷೆಯಾದ ಡಾ. ದಾಕ್ಷಾಯಿಣಿ ಅವ್ವಾಜಿ ಅವರು ಭಕ್ತರಲ್ಲಿ ಆತಂಕ ಬೇಡವೆಂದು ಮನವಿ ಮಾಡಿಕೊಂಡಿದ್ದಾರೆ. “ಡಾ. ಅಪ್ಪಾಜಿ ಅವರ ಆರೋಗ್ಯದ ಬಗ್ಗೆ ಹರಡುತ್ತಿರುವ ವದಂತಿಗಳಿಗೆ ಕಿವಿಗೊಡಬೇಡಿ,” ಎಂದು ಮನವಿ ಮಾಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa