ರಾಯಚೂರು, 26 ಜುಲೈ (ಹಿ.ಸ.) :
ಆ್ಯಂಕರ್ : ಕರ್ನಾಟಕ ಲೋಕಸೇವಾ ಆಯೋಗವು ಇಲಾಖೆಗಳ ಹೈ.ಕ.ವೃಂದದ ಗ್ರೂಪ್ ಬಿ ಹುದ್ದೆಗಳಿಗೆ ಕನ್ನಡ ಭಾಷಾ ಪರೀಕ್ಷೆಯು ರಾಯಚೂರು ತಾಲೂಕಿನ 8 ಪರೀಕ್ಷಾ ಕೇಂದ್ರಗಳಲ್ಲಿ ಜುಲೈ 26ರಂದು ನಡೆಯಲಿದೆ.
ಈ ಪರೀಕ್ಷೆಯು ಸುರಕ್ಷಿತವಾಗಿ ನಡೆಸುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ ಸುತ್ತಲು 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ ಅವರು ಆದೇಶ ಹೊರಡಿಸಿದ್ದಾರೆ. ಈ ಪರೀಕ್ಷಾ ಕೇಂದ್ರಗಳ ಸುತ್ತಲಿನ ಎಲ್ಲಾ ಝರಾಕ್ಸ ಅಂಗಡಿಗಳನ್ನು ಮತ್ತು ಸೈಬರ್ ಕೆಫೆಗಳನ್ನು ಪರೀಕ್ಷಾ ಸಮಯದಲ್ಲಿ ಕಡ್ಡಾಯವಾಗಿ ಮುಚ್ಚುವಂತೆ ಆದೇಶಿಸಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್