ರಾಜಸ್ಥಾನ ಶಾಲಾ ದುರಂತ : ಐವರು ಶಿಕ್ಷಕರ ಅಮಾನತು
ಜೈಪುರ, 26 ಜುಲೈ (ಹಿ.ಸ.) : ಆ್ಯಂಕರ್ : ರಾಜಸ್ಥಾನದ ಝಲಾವರ್ ಜಿಲ್ಲೆಯ ಮನೋಹರ್ಥಾನಾ ಬ್ಲಾಕ್‌ನ ಸರ್ಕಾರಿ ಪ್ರಾಥಮಿಕ ಶಾಲೆಯ ಮೇಲ್ಛಾವಣಿ ಕುಸಿತದಿಂದ ಏಳು ವಿದ್ಯಾರ್ಥಿಗಳು ದುರ್ಮರಣಕ್ಕೀಡಾದ ದುರಂತ ಹಿನ್ನೆಲೆ, ಐವರು ಶಿಕ್ಷಕರನ್ನು ಅಮಾನತು ಮಾಡಲಾಗಿದೆ. ದುರಂತ ಶುಕ್ರವಾರ ಬೆಳಗ್ಗೆ 8:30ರ ಸುಮಾರಿಗೆ ಶಾಲ
ರಾಜಸ್ಥಾನ ಶಾಲಾ ದುರಂತ : ಐವರು ಶಿಕ್ಷಕರ ಅಮಾನತು


ಜೈಪುರ, 26 ಜುಲೈ (ಹಿ.ಸ.) :

ಆ್ಯಂಕರ್ : ರಾಜಸ್ಥಾನದ ಝಲಾವರ್ ಜಿಲ್ಲೆಯ ಮನೋಹರ್ಥಾನಾ ಬ್ಲಾಕ್‌ನ ಸರ್ಕಾರಿ ಪ್ರಾಥಮಿಕ ಶಾಲೆಯ ಮೇಲ್ಛಾವಣಿ ಕುಸಿತದಿಂದ ಏಳು ವಿದ್ಯಾರ್ಥಿಗಳು ದುರ್ಮರಣಕ್ಕೀಡಾದ ದುರಂತ ಹಿನ್ನೆಲೆ, ಐವರು ಶಿಕ್ಷಕರನ್ನು ಅಮಾನತು ಮಾಡಲಾಗಿದೆ.

ದುರಂತ ಶುಕ್ರವಾರ ಬೆಳಗ್ಗೆ 8:30ರ ಸುಮಾರಿಗೆ ಶಾಲೆ ಆರಂಭವಾಗುತ್ತಿದ್ದ ವೇಳೆ ಸಂಭವಿಸಿದ್ದು, ಶಿಥಿಲಾವಸ್ಥೆಯಲ್ಲಿದ್ದ ಶಾಲಾ ಕಟ್ಟಡದ ಮೇಲ್ಛಾವಣಿ ಭಾರೀ ಮಳೆಯ ಕಾರಣದಿಂದ ಕುಸಿತಕ್ಕೊಳಗಾಯಿತು. ಮಕ್ಕಳು ತರಗತಿಗಳಲ್ಲಿ ಇದ್ದ ವೇಳೆ ಈ ಅವಘಡ ಸಂಭವಿಸಿದೆ.

ಈ ಕಟ್ಟಡದ ಸ್ಥಿತಿ ಕುರಿತು ಈಗಾಗಲೇ ಎಚ್ಚರಿಕೆ ನೀಡಲಾಗಿತ್ತು. ಆದರೆ ಶಿಕ್ಷಕರು ಮತ್ತು ಶಾಲಾ ನಿರ್ವಹಣಾ ಮಂಡಳಿ ಸೂಕ್ತ ಕ್ರಮ ಕೈಗೊಂಡಿರಲಿಲ್ಲ ಎಂಬ ಆರೋಪವನ್ನು ಪೋಷಕರು ಹೊರಹಾಕಿದ್ದಾರೆ. ಈ ವೇಳೆ ಗಾಯಗೊಂಡ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತದೇಹಗಳನ್ನು ಅವಶೇಷಗಳಿಂದ ಹೊರತೆಗೆದು ಅಂತ್ಯಕ್ರಿಯೆ ನಡೆಸಲಾಗುತ್ತಿದೆ.

ಈ ದುರಂತದ ಹಿನ್ನೆಲೆಯಲ್ಲಿ ಮನೋಹರ್ಥಾನಾ ಬ್ಲಾಕ್‌ನ ಎಲ್ಲಾ ಸರ್ಕಾರಿ ಶಾಲೆಗಳಿಗೆ ಇಂದು (ಜುಲೈ 26) ರಜೆ ಘೋಷಿಸಲಾಗಿದೆ.

ರಾಜಸ್ಥಾನದ ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ ಅವರು ಘಟನೆ ಕುರಿತು ಆಘಾತ ವ್ಯಕ್ತಪಡಿಸಿ, ತನಿಖೆಗೆ ಆದೇಶ ನೀಡಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande