ಹಾಸನ, 26 ಜುಲೈ (ಹಿ.ಸ.) :
ಆ್ಯಂಕರ್ : ಗ್ಯಾರಂಟಿ ಯೋಜನೆಗಳ ಜಾರಿಯಿಂದ ಸಾರ್ವಜನಿಕರು ಕೊಂಡುಕೊಳ್ಳುವ ಸಾಮರ್ಥ್ಯ ಹೆಚ್ಚಾಗಿದ್ದು, ತಲಾ ಆದಾಯ ಏರಿಕೆಯಾಗಿ ಈಡಿ ದೇಶದಲ್ಲಿ ಕರ್ನಾಟಕ ರಾಜ್ಯ ಮೊದಲ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಹಾಸನ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಇವರ ಸಹಯೋಗದಲ್ಲಿ ಅರಸೀಕೆರೆ ತಾಲ್ಲೂಕು ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಅರಸೀಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಲೋಕಾರ್ಪಣೆ ಹಾಗೂ ಫಲಾನುಭವಿಗಳ ಸಮಾವೇಶ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಜಾರಿಗೊಳಿಸುವುದರ ಜೊತೆಗೆ ಅಭಿವೃದ್ಧಿಯಲ್ಲೂ ರಾಜ್ಯ ಸರ್ಕಾರ ಮುಂಚೂಣಿಯಲ್ಲಿದೆ ಎಂದು ತಿಳಿಸಿದರು.
ಬಡವ ಶ್ರೀಮಂತ ಎಂಬ ಅಸಮಾನತೆ ತೊಡೆದು ಹಾಕಿ ಸಮಾಜದಲ್ಲಿ ಪರಿವರ್ತನೆ ತರುವುದರಿಂದ ಸಮ ಸಮಾಜ ನಿರ್ಮಾಣಕ್ಕೆ ಸಹಾಯವಾಗುತ್ತದೆ ಎಂದ ಅವರು ಸರ್ಕಾರ ಈ ನಿಟ್ಟಿನಲ್ಲಿ ಹೆಚ್ಚು ಒತ್ತು ನೀಡಿ ಬಡವರಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು.
52 ಸಾವಿರ ಕೋಟಿ ರೂಗಳನ್ನು ಗ್ಯಾರಂಟಿ ಯೋಜನೆಗಳಿಗೆ ವೆಚ್ಚ ಮಾಡಲಾಗುತ್ತಿದೆ, 1.20 ಲಕ್ಷ ಕೋಟಿ ರೂಗಳನ್ನು ಅಭಿವೃದ್ಧಿಗೆ ವೆಚ್ಚ ಮಾಡಲಾಗುತ್ತಿದೆ, ಎತ್ತಿನಹೊಳೆ ಯೋಜನೆಗೆ ಇನ್ನೂ 6000 ಕೋಟಿ ರೂಗಳು ಬೇಕಾಗುತ್ತದೆ 2 ವರ್ಷದಲ್ಲಿ ಸಂಪೂರ್ಣ ಮುಗಿಸಿ 7 ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸಲಾಗುವುದು ಎಂದು ತಿಳಿಸಿದರು.
ನೀರಾವರಿ, ರಸ್ತೆಗಳ ಅಭಿವೃದ್ಧಿ, ಶಿಕ್ಷಣ, ಹಾಗೂ ಆರೋಗ್ಯಕ್ಕೆ ಹೆಚ್ಚು ಒತ್ತು ನೀಡಿ ಕೆಲಸ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಅರಸೀಕೆರೆ ಭಾಗದಲ್ಲಿ ಹೆಚ್ಚು ತೆಂಗು ಬೆಳೆಯುತ್ತಾರೆ ಈ ಬೆಳೆಗೆ ಕಪ್ಪು ತಲೆ ಹುಳು, ಕಾಂಡ ಸೊರುವುದು ಮತ್ತಿತರ ರೋಗ ರುಜಿನಗಳು ಹೆಚ್ಚಾಗುತ್ತಿರುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಎಷ್ಟೇ ಹಣ ಖರ್ಚು ಆದರೂ ರೋಗ ನಿಯಂತ್ರಣ ಮಾಡಲು ಪ್ರಯತ್ನ ಮಾಡುತ್ತೇವೆ ಎಂದರು.
ಅರಸೀಕೆರೆ ತಾಲ್ಲೂಕಿನಲ್ಲಿ ಇಂದು ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಮತ್ತು ಪಾಲಿಟೆಕ್ನಿಕ್ ಕಾಲೇಜುಗಳನ್ನು ಉದ್ಘಾಟನೆ ಮಾಡಲಾಗಿದೆ ಗ್ರಾಮೀಣ ಪ್ರದೇಶದ ಮಕ್ಕಳು ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಅರಸೀಕೆರೆಯಲ್ಲಿ ಇದೊಂದು ಐತಿಹಾಸಿಕ ದಿನ ಕಾರ್ಯಕ್ರಮದಲ್ಲಿ ನೆರೆದಿರುವ ಜನಸ್ತೋಮ ನೋಡಿದರೆ ಶಿವಲಿಂಗೇಗೌಡ ಅವರ ಮೇಲಿನ ಜನಪ್ರಿಯತೆ ತೋರುತ್ತದೆ ಎಂದರು.
ಶಿವಲಿಂಗೇಗೌಡರು ಜನಪರ ಕಾಳಜಿಯಿಂದ ಕ್ಷೇತ್ರದ ಅಭಿವೃದ್ಧಿಗಾಗಿ ಶ್ರಮವಹಿಸಿ ಕೆಲಸ ಮಾಡುತ್ತಿದ್ದಾರೆ ವಿಧಾನ ಸೌಧದಲ್ಲೂ ಯಾವುದೇ ವಿಶೇಷಕ್ಕೆ ಸಂಬಂಧಿಸಿದಂತೆ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರಲು ಪ್ರಯತ್ನ ಮಾಡುತ್ತಾರೆ ಎಂದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa