ಧಾರವಾಡ, 26 ಜುಲೈ (ಹಿ.ಸ.) :
ಆ್ಯಂಕರ್ : ಧಾರವಾಡ ಜಿಲ್ಲೆಯ ಧಾರವಾಡ, ಕುಂದಗೋಳ, ಕಲಘಟಗಿ, ನವಲಗುಂದ ನ್ಯಾಯಾಲಯ ಸಂಕೀರ್ಣಗಳಲ್ಲಿ ಸ್ವಚ್ಚತಾ ಕಾರ್ಯ ನಿರ್ವಹಿಸುವುದಕ್ಕಾಗಿ ಮಾನವ ಸಂಪನ್ಮೂಲ ಒದಗಿಸಲು, ಮಾನವ ಸಂಪನ್ಮೂಲ ಏಜನ್ಸಿಗಳಿಂದ ಟೆಂಡರ ಅರ್ಜಿ ಆಹ್ವಾನಿಸಲಾಗಿದೆ.
ಮುಚ್ಚಿದ ಲಕೋಟೆಯಲ್ಲಿ ಟೆಂಡರ ಅರ್ಜಿಗಳನ್ನು ಧಾರವಾಡ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇವರಿಗೆ ಆಗಸ್ಟ್ 05, 2025 ಸಂಜೆ 5:30 ಗಂಟೆ ರೋಳಗಾಗಿ ಸಲ್ಲಿಸಬೇಕು. ಟೆಂಡರ ಅರ್ಜಿಗಳನ್ನು ಆಗಸ್ಟ್ 07, 2025 ರ ಸಂಜೆ 5.30 ಗಂಟೆಗೆ ಜಿಲ್ಲಾ ನ್ಯಾಯಾಧೀಶರ ಕಚೇರಿಯಲ್ಲಿ ತೆರೆಯಲಾಗುವುದು.
ಹೆಚ್ಚಿನ ಮಾಹಿತಿಗಾಗಿ http://dharwad.dcourts.gov.in/notice-category/tenders/ ವೆಬ್‍ಸೈಟ್‍ಗೆ ಭೇಟಿ ನೀಡಬಹುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa