ಗದಗ ಜಿಲ್ಲೆಯಲ್ಲಿ ಮುಂದುವರಿದ ಯೂರಿಯಾ ಗೊಬ್ಬರ ಪರದಾಟ
ಗದಗ, 26 ಜುಲೈ (ಹಿ.ಸ.) : ಆ್ಯಂಕರ್ : ಗದಗ ಜಿಲ್ಲೆ ನರಗುಂದ ಪಟ್ಟಣದಲ್ಲಿ ಯೂರಿಯಾ ಗೊಬ್ಬರಕ್ಕಾಗಿ ರೈತರ ಪರದಾಟ ಮುಂದುವರಿದಿದೆ. ಧಾರಾಕಾರವಾಗಿ ಮಳೆಯಾಗುತ್ತಿದ್ದರೂ ಕೂಡ ರೈತರು ತಲೆಯ ಮೇಲೆ ಟಾವೆಲ್ ಹಾಕಿಕೊಂಡು ಸಾಲಿನಲ್ಲಿ ನಿಂತು ಗೊಬ್ಬರಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ. ಗೋವಿನ ಜೋಳದ ಬೆಳೆಗೆ ಗೊಬ
ಪೋಟೋ


ಗದಗ, 26 ಜುಲೈ (ಹಿ.ಸ.) :

ಆ್ಯಂಕರ್ : ಗದಗ ಜಿಲ್ಲೆ ನರಗುಂದ ಪಟ್ಟಣದಲ್ಲಿ ಯೂರಿಯಾ ಗೊಬ್ಬರಕ್ಕಾಗಿ ರೈತರ ಪರದಾಟ ಮುಂದುವರಿದಿದೆ. ಧಾರಾಕಾರವಾಗಿ ಮಳೆಯಾಗುತ್ತಿದ್ದರೂ ಕೂಡ ರೈತರು ತಲೆಯ ಮೇಲೆ ಟಾವೆಲ್ ಹಾಕಿಕೊಂಡು ಸಾಲಿನಲ್ಲಿ ನಿಂತು ಗೊಬ್ಬರಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ.

ಗೋವಿನ ಜೋಳದ ಬೆಳೆಗೆ ಗೊಬ್ಬರ ನೀಡುವ ಅವಶ್ಯಕತೆಯಿರುವ ಹಿನ್ನೆಲೆಯಲ್ಲಿ, ಗೊಬ್ಬರದ ಕೊರತೆಯಿಂದ ಬೆಳೆ ಹಾಳಾಗುವ ಆತಂಕ ರೈತರನ್ನು ಕಾಡುತ್ತಿದೆ. ತಕ್ಷಣ ಯೂರಿಯಾ ಗೊಬ್ಬರ ಹಾಕದಿದ್ದರೆ ಜೋಳದ ಎಲೆಗಳು ಹಳದಿ ಬಣ್ಣಕ್ಕೆ ತಿರುಗುತ್ತಿದ್ದು, ಬೆಳೆಯ ಬೃಹತ್ ಹಾನಿಗೆ ಕಾರಣವಾಗುತ್ತದೆ ಎಂದು ರೈತರು ಹೇಳುತ್ತಿದ್ದಾರೆ.

ಸಮರ್ಪಕವಾಗಿ ಗೊಬ್ಬರ ಪೂರೈಕೆ ಮಾಡದ ಕೃಷಿ ಇಲಾಖೆ ಮತ್ತು ಸರಕಾರದ ವಿರುದ್ಧ ರೈತರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಕೂಡಲೇ ಸಮಸ್ಯೆಗೆ ಸ್ಪಂದಿಸಬೇಕೆಂದು ಆಗ್ರಹಿಸಿದ್ದಾರೆ. ಗೊಬ್ಬರದ ಸರಬರಾಜು ಸರಳಗೊಳಿಸಿ ರೈತರ ಕಷ್ಟಗಳಿಗೆ ಪರಿಹಾರ ನೀಡಬೇಕೆಂದು ಒತ್ತಾಯಿಸಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande