ಸೊರಟೂರಿನಲ್ಲಿ 35ನೇ ರೈತ ಹುತಾತ್ಮ ದಿನಾಚರಣೆ, ಬಸವರಾಜ ಬೊಮ್ಮಾಯಿ ಶ್ರದ್ಧಾಂಜಲಿ ಅರ್ಪಣೆ
ಗದಗ, 27 ಜುಲೈ (ಹಿ.ಸ.) : ಆ್ಯಂಕರ್ : ಗದಗ ತಾಲೂಕಿನ ಸೊರಟೂರ ಗ್ರಾಮದಲ್ಲಿಂದು ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ 35ನೇ ರೈತ ಹುತಾತ್ಮ ದಿನಾಚರಣೆ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರದ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಸಂಸದರಾದ ಬಸವರಾಜ ಬೊಮ್ಮಾಯಿ ಭಾಗವಹಿಸಿ
ಪೋಟೋ


ಗದಗ, 27 ಜುಲೈ (ಹಿ.ಸ.) :

ಆ್ಯಂಕರ್ : ಗದಗ ತಾಲೂಕಿನ ಸೊರಟೂರ ಗ್ರಾಮದಲ್ಲಿಂದು ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ 35ನೇ ರೈತ ಹುತಾತ್ಮ ದಿನಾಚರಣೆ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರದ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಸಂಸದರಾದ ಬಸವರಾಜ ಬೊಮ್ಮಾಯಿ ಭಾಗವಹಿಸಿ, ರೈತ ಹೋರಾಟಗಳ ಮಹತ್ವದ ಕುರಿತು ಮಾತನಾಡಿದರು.

1990ರ ಜುಲೈ 27ರಂದು ಬಗರ್ ಹುಕುಂ ಹಕ್ಕು ಚಳವಳಿಯ ವೇಳೆ ಹುತಾತ್ಮರಾದ ದಿವಂಗತ ಶ್ರೀ ಮಹಾಲಿಂಗಪ್ಪ ಮಲ್ಲೇಶಪ್ಪ ಗಿಡ್ಡಕೆಂಚಣ್ಣವರ, ಶ್ರೀ ಚನ್ನಬಸಪ್ಪ ನಿರ್ವಾಹಣಶೆಟ್ರ ಹಾಗೂ ಶ್ರೀ ದೇವಲಪ್ಪ ಲಮಾಣಿ ಅವರ ಸ್ಮಾರಕಕ್ಕೆ ಬೊಮ್ಮಾಯಿ ಸೇರಿದಂತೆ ಅನೇಕ ನಾಯಕರು ಪುಷ್ಪ ನಮನ ಸಲ್ಲಿಸಿದರು. “ಇವರೆಲ್ಲರೂ ನಮ್ಮ ಹಕ್ಕುಗಳಿಗಾಗಿ ಪ್ರಾಣ ತ್ಯಾಗ ಮಾಡಿದ ಹೋರಾಟಗಾರರು. ಅವರ ತ್ಯಾಗವನ್ನು ಮರೆಯಲಾಗದು” ಎಂದು ಬೊಮ್ಮಾಯಿ ಹೇಳಿದರು.

ಕಾರ್ಯಕ್ರಮದಲ್ಲಿ ಮಾಜಿ ಸಚಿವ ಎಸ್.ಎಸ್. ಪಾಟೀಲ್, ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಶಾಸಕರಾದ ಡಾ. ಚಂದ್ರು ಲಮಾಣಿ, ಬಿಜೆಪಿ ಜಿಲ್ಲಾಧ್ಯಕ್ಷ ರಾಜು ಕುರಡಗಿ, ಕೆ.ಸಿ.ಸಿ. ಬ್ಯಾಂಕ್ ಅಧ್ಯಕ್ಷ ಶಿವಕುಮಾರಗೌಡ ಪಾಟೀಲ್, ಮುಖಂಡರು ರವಿ ದಂಡಿನ, ರೈತ ಸಂಘದ ಅಧ್ಯಕ್ಷ ರಾಮಣ್ಣ ಕಮ್ಮಾರ, ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

ರೈತ ಸಂಘದ ವತಿಯಿಂದ ಹಮ್ಮಿಕೊಂಡ ಈ ಕಾರ್ಯಕ್ರಮವು ರೈತರ ಹಕ್ಕು ಮತ್ತು ಹಿತಾಸಕ್ತಿಗಳ ಪರ ಹೋರಾಟಕ್ಕೆ ಸ್ಮರಣೆ ರೂಪವಾಗಿದೆ. ಈ ವೇಳೆ ಹಲವರು ಭಾಗವಹಿಸಿದ್ದರು.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande