ಹಾಸನ, 27 ಜುಲೈ (ಹಿ.ಸ.) :
ಆ್ಯಂಕರ್ : ಪರಿಶಿಷ್ಟ ಜಾತಿ/ವರ್ಗದ ವಿದ್ಯಾರ್ಥಿಗಳಿಗಾಗಿ 2025-26ನೇ ಸಾಲಿನ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಹಾಗೂ ಎಸ್ಎಸ್ಎಲ್ ಸಿ ಪ್ರೋತ್ಸಾಹಧನಕ್ಕೆ ಸಮಾಜ ಕಲ್ಯಾಣ ಇಲಾಖೆ ಅರ್ಜಿ ಆಹ್ವಾನಿಸಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನಲ್ಲಿ ಈ ಕಾರ್ಯಕ್ರಮ ಜಾರಿಯಲ್ಲಿದೆ.
ಅರ್ಜಿ ಸಲ್ಲಿಸಲು ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ, SATS ಸಂಖ್ಯೆಯೊಂದಿಗೆ ಆಧಾರ್-ಬ್ಯಾಂಕ್ NPCI ಮ್ಯಾಪಿಂಗ್ ಕಡ್ಡಾಯವಾಗಿದೆ. 9ನೇ ತರಗತಿ ಮೇಲ್ಪಟ್ಟ ವಿದ್ಯಾರ್ಥಿಗಳಿಗೆ biometric e-KYC ಅವಶ್ಯಕ. ಪ್ರೋತ್ಸಾಹಧನಕ್ಕಾಗಿ ssw.kar.nic.in/prizemoney ನಲ್ಲಿ ನೋಂದಣಿ ಅಗತ್ಯವಿದ್ದು, ಹೆಚ್ಚಿನ ಮಾಹಿತಿಗೆ: ಮೊಬೈಲ್ 9591104407 ಸಂಪರ್ಕಿಸಲು ಕೋರಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa